ಹೊಸಪೇಟೆ (ವಿಜಯನಗರ): ದೀರ್ಘ ಕಾಲದಿಂದಲೂ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಅಲೆಮಾರಿ ಮತ್ತು ಪರಿಶಿಷ್ಟ ಸಮುದಾಯಗಳ ಯಾವುದೇ ಕುಟುಂಬಗಳನ್ನು ಎಸ್ಐಟಿ ವರದಿ ಬರುವವರೆಗೂ ಒಕ್ಕಲೆಬ್ಬಿಸಬಾರದು ಎಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷ ಎಲ್.ಮೂರ್ತಿ ತಾಕೀತು ಮಾಡಿದರು.

ಇಲ್ಲಿ ಮಂಗಳವಾರ ಸಮುದಾಯದ ಮುಖಂಡರು, ಸಾರ್ವಜನಿಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.

ಒಕ್ಕಲೆಬ್ಬಿಸಬಾರದು, ಒಂದು ವೇಳೆ ಒಕ್ಕಲೆಬ್ಬಿಸಿದರೆ ಅವರಿಗೆ ಪರ್ಯಾಯವಾಗಿ ಮೂಲಭೂತ ಸೌಕರ್ಯ ಹಾಗೂ ಕಾರ್ಪಸ್ ಫಂಡ್ ಒದಗಿಸಬೇಕು ಎಂಬ ಸ್ಪಷ್ಟ ಸೂಚನೆಯನ್ನು ಸರ್ಕಾರದ ಕಾರ್ಯದರ್ಶಿಗಳು ಮತ್ತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸಭೆ ನಡೆಸಿದ ವೇಳೆ ಜಿಲ್ಲೆಯಲ್ಲಿ ಹಲವು ವಿಧದ ಸಮಸ್ಯೆಗಳು ಗಮನಕ್ಕೆ ಬಂದಿವೆ. ಅದರಲ್ಲಿ ಮುಖ್ಯವಾಗಿ ಸ್ಮಶಾನ ಭೂಮಿ ಸಮಸ್ಯೆ, ಎಸ್ಸಿ, ಎಸ್ಟಿ ಹಾಸ್ಟೆಲ್ಗಳಲ್ಲಿ ಮೂಲಸೌಲಭ್ಯ ಕೊರತೆ, ವಾರ್ಡನ್ಗಳ ಕೊರತೆ, ಗುತ್ತಿಗೆ ನೀಡುವಿಕೆಯಲ್ಲಿ ಸಮಸ್ಯೆ, ಪೋಕ್ಸೊ ಪ್ರಕರಣಗಳು ಹೆಚ್ಚಿದ್ದು, ಅವುಗಳ ತ್ವರಿತ ವಿಚಾರಣೆ ನಡೆಯದೆ ಇರುವುದು, ಪವನ ಯಂತ್ರಗಳು ಇರುವಲ್ಲಿ ಎಸ್ಸಿ, ಎಸ್ಟಿ ಭೂ ಮಾಲೀಕರ ದೌರ್ಜನ್ಯ, ಪಿಡಿಸಿಎಲ್ ಪ್ರಕರಣಗಳ ವಿಲೇವಾರಿಯಲ್ಲಿ ವಿಳಂಬದಂತಹ ಹಲವು ಸಮಸ್ಯೆಗಳು ಗಮನಕ್ಕೆ ಬಂದಿವೆ. ಎಲ್ಲವನ್ನೂ ಜಿಲ್ಲಾಡಳಿತ, ಇತರ ಇಲಾಖೆಗಳು ಶೀಘ್ರ ಪರಿಹರಿಸುವಂತೆ ಸ್ಪಷ್ಟ ತಾಕೀತು ಮಾಡಲಾಗಿದೆ, 20 ದಿನದಲ್ಲಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.

ವೇತನ ಸಿಕ್ಕಿಲ್ಲ: ಪೌರಕಾರ್ಮಿಕರಿಗೆ 15 ತಿಂಗಳಿಂದ ವೇತನ ಸಿಗದ ಸಮಸ್ಯೆಯೂ ಇಲ್ಲಿದೆ. ತಕ್ಷಣ ಅದರ ಬಗ್ಗೆ ಸ್ಥಳೀಯಾಡಳಿತಗಳು ಗಮನ ಹರಿಸಬೇಕು. ಕಂದಾಯ ಇಲಾಖೆಯಲ್ಲಿ ಪಹಣಿ ತಿದ್ದುಪಡಿ, ಖಾತಾ ಬದಲಾವಣೆ, ಆಕಾರ್ಬಂದ್ ಸರ್ವೇಗೆ ಸಂಬಂಧಿಸಿ ಗಂಭೀರ ಸಮಸ್ಯೆಗಳಿರುವುದು ಗಮನಕ್ಕೆ ಬಂದಿದೆ. ದೂರದ ಊರುಗಳಿಂದ ಬರುವ ಜನರನ್ನು ಅಲೆದಾಡಿಸದಂತೆ ತಾಲ್ಲೂಕು ಮತ್ತು ಜಿಲ್ಲಾ ದಂಡಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆಯೋಗದ ಅಧ್ಯಕ್ಷರು ತಿಳಿಸಿದರು.

ಸ್ಲಂ ನಿವಾಸಿಗಳಿಗೆ ನಿವೇಶನ ಭಾಗ್ಯ: ಹರಪನಹಳ್ಳಿ, ಕೂಡ್ಲಿಗಿ ಸೇರಿದಂತೆ ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳಲ್ಲಿರುವ ಸ್ಲಂಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ. ಸೂಕ್ತ ಜಮೀನನ್ನು ಗುರುತಿಸಿ, ವಿಶೇಷ ಪ್ಯಾಕೇಜ್ ಮೂಲಕ ನಿವೇಶನ ಕಲ್ಪಿಸಿಕೊಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.

ಆಯೋಗಕ್ಕೆ ದೂರು ಸಲ್ಲಿಸಲು ಸಾರ್ವಜನಿಕರು ಅಲೆಯುವುದನ್ನು ತಪ್ಪಿಸಲು ಮುಂದಿನ ದಿನಗಳಲ್ಲಿ ಸಂಪೂರ್ಣ ಆನ್ಲೈನ್ ವ್ಯವಸ್ಥೆ ತರಲಾಗುತ್ತಿದೆ. ಗ್ರಾಮೀಣ ಭಾಗದ ಜನರಿಗೆ ನೆರವಾಗಲು ಪ್ರತಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಿ, ಅಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆ ಮಾಡಲಾಗುವುದು. ಆ ಬಳಿಕ ನೋಟಿಸ್ ಜಾರಿ ಮಾಡಿ, ಅಗತ್ಯಬಿದ್ದರೆ ದೂರವಾಣಿ ಮೂಲಕ ಕರೆಸಿ ಸಮಸ್ಯೆ ಇತ್ಯರ್ಥಪಡಿಸಲಾಗುವುದು ಎಂದರು.

ಇದಕ್ಕೆ ಮೊದಲು ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಎಸ್ಪಿ ಎಸ್.ಜಾಹ್ನವಿ, ಜಿಲ್ಲಾ ಪಂಚಾಯಿತಿ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಆಯೋಗದ ಕಾರ್ಯದರ್ಶಿ ಎಚ್.ಎಸ್. ಶಿವರಾಮ್, ಸದಸ್ಯರಾದ ಗೀತಾ ಥಾವಂಶಿ, ಎನ್.ದಿವಾಕರ್, ಸುನೀಲ್ ಎಂ.ಉಕ್ಕಲಿ, ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಮೊಹಮ್ಮದ್ ಇಮಾಂ ನಿಯಾಜಿ ಇತರರು ಇದ್ದರು.

ಖಾಸಗಿ ಕಂಪನಿಗಳಲ್ಲಿ ಉದ್ಯೋಗ...

ಜಿಲ್ಲೆಯಲ್ಲಿ ಬೃಹತ್ ಕಂಪನಿಗಳು ಜಮೀನು ಸ್ವಾಧೀನಪಡಿಸಿಕೊಂಡಿದ್ದು, ಇದರಲ್ಲಿ ಪರಿಶಿಷ್ಟ ಸಮುದಾಯಗಳ ಭೂಮಿಯೂ ಸೇರಿದೆ. ಭೂಮಿ ಕಳೆದುಕೊಂಡ ಹಾಗೂ ಜಮೀನು ರಹಿತ ಸಮುದಾಯದ ವಿದ್ಯಾವಂತ ಯುವಕ-ಯುವತಿಯರಿಗೆ ಆಯಾ ಕಂಪನಿಗಳಲ್ಲೇ ಉದ್ಯೋಗಾವಕಾಶ ಕಲ್ಪಿಸಲು ಮತ್ತು ಕಂಪನಿಗಳ ಸಿಎಸ್ಆರ್ ನಿಧಿಯ ಹಣವನ್ನು ಈ ಸಮುದಾಯಗಳ ಅಭಿವೃದ್ಧಿಗೆ ಬಳಸಲು ಸರ್ಕಾರ ಮಟ್ಟದಲ್ಲಿ ನಿರ್ದೇಶನ ನೀಡಲಾಗುವುದು ಎಂದು ಎಲ್.ಮೂರ್ತಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.