ಭಾನುವಾರ, ಏಪ್ರಿಲ್ 18, 2021
31 °C

ಹಂಪಿ ಕನ್ನಡ ವಿಶ್ವವಿದ್ಯಾಲಯದ 70 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯನಗರ (ಹೊಸಪೇಟೆ): ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ 70 ವಿದ್ಯಾರ್ಥಿಗಳಿಗೆ ಸೋಮವಾರ ಕುಲಪತಿ ಪ್ರೊ.ಸ.ಚಿ. ರಮೇಶ ಅವರು ಲ್ಯಾಪ್‌ಟಾಪ್‌ ವಿತರಿಸಿದರು.

2018–19ನೇ ಸಾಲಿನ ಪಿಎಚ್‌.ಡಿ. ಅಧ್ಯಯನಕ್ಕೆ ಪ್ರವೇಶ ಪಡೆದ ಪರಿಶಿಷ್ಟ ಜಾತಿಯ 51, ಪರಿಶಿಷ್ಟ ಪಂಗಡದ 19 ವಿದ್ಯಾರ್ಥಿಗಳಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನದಲ್ಲಿ ಲ್ಯಾಪ್‌ಟಾಪ್‌ ವಿತರಿಸಲಾಯಿತು.

ಕುಲಸಚಿವ ಪ್ರೊ.ಎ. ಸುಬ್ಬಣ್ಣ ರೈ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಿಶೇಷ ಘಟಕದ ಸಂಯೋಜನಾಧಿಕಾರಿ ಎ. ಕಾಶಿ ವಿಶ್ವನಾಥ, ಗಣಕ ಕೇಂದ್ರದ ಸಹಾಯಕ ನಿರ್ದೇಶಕ ಎಸ್.ಕೆ.ವಿಜಯೇಂದ್ರ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು