ಶನಿವಾರ, ಮೇ 21, 2022
19 °C

ಹೊಸಪೇಟೆ: ಕಂಬಾರ ಪತ್ನಿ ಸತ್ಯಭಾಮಾಗೆ ಶ್ರದ್ಧಾಂಜಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ವಿಶ್ರಾಂತ ಕುಲಪತಿ ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮಾ ಕಂಬಾರ ನಿಧನಕ್ಕೆ ಮಂಗಳವಾರ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ವಿ.ವಿ. ಭುವನ ವಿಜಯ ಸಭಾಂಗಣದಲ್ಲಿ ಸಭೆ ಸೇರಿದ ಬೋಧಕ, ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಎರಡು ನಿಮಿಷ ಮೌನ ಆಚರಿಸಿ ಗೌರವ ಸಲ್ಲಿಸಿದರು.

‘ಕನ್ನಡ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಪತಿ ಚಂದ್ರಶೇಖರ ಕಂಬಾರ ಅವರ ಎಲ್ಲ ಕನಸು, ಕಾಣ್ಕೆಗಳ ಪ್ರೇರಕ ಶಕ್ತಿ ಸತ್ಯಭಾಮಾ ಕಂಬಾರ ಆಗಿದ್ದರು. ವಿಶ್ವವಿದ್ಯಾಲಯದ ಕೂಡು ಕುಟುಂಬಕ್ಕೆ ತಾಯಿ ಆಗಿದ್ದರು. ಅವರ ಕುಟುಂಬಕ್ಕೆ ದುಃಖ ಸಹಿಸಿಕೊಳ್ಳುವ ಶಕ್ತಿ ದೇವರು ಕೊಡಲಿ’ ಎಂದು ಕುಲಪತಿ ಪ್ರೊ. ಸ.ಚಿ. ರಮೇಶ ಹೇಳಿದರು. ಕುಲಸಚಿವ ಪ್ರೊ. ಎ.ಸುಬ್ಬಣ್ಣ ರೈ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು