ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್) 2025–26ನೇ ಆರ್ಥಿಕ ವರ್ಷಕ್ಕೆ ಸಿದ್ಧಪಡಿಸಿರುವ ಉದ್ದೇಶಿತ ಸಾಲ ಯೋಜನೆ (ಪಿಎಲ್ಪಿ) ಬಿಡುಗಡೆ ಮಾಡಲಾಗಿದ್ದು, ₹5,898.39 ಕೋಟಿ ಗುರಿ ನಿಗದಿಪಡಿಸಲಾಗಿದೆ.

ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಅವರು ಪಿಎಲ್ಪಿ ಬಿಡುಗಡೆ ಮಾಡಿದರು.

ಪಿಎಲ್ಪಿಯಲ್ಲಿ ಕೃಷಿಗೆ ವಿಶೇಷ ಒತ್ತು ನೀಡಲಾಗಿದೆ. ರೈತರಿಗೆ ಬೆಳೆಸಾಲಕ್ಕಾಗಿ ₹2,561.17 ಕೋಟಿ, ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ದೀರ್ಘಾವಧಿ ಸಾಲಕ್ಕೆ ₹963.07 ಕೋಟಿ, ಕೃಷಿಗೆ ಮೂಲ ಸೌಕರ್ಯ ಕಲ್ಪಿಸುವುದಕ್ಕಾಗಿ ₹66.83 ಕೋಟಿ ಮತ್ತು ಕೃಷಿ ಪೂರಕ ಚಟುವಟಿಕೆಗೆ ₹231.53 ಕೋಟಿ ಗುರಿ ಹಾಕಿಕೊಳ್ಳಲಾಗಿದೆ.

ಎಂಎಸ್ಎಂಇ ಕ್ಷೇತ್ರಕ್ಕೆ ₹1,777.43 ಕೋಟಿ, ರಫ್ತು ಸಾಲಕ್ಕೆ ₹21.60 ಕೋಟಿ, ಶಿಕ್ಷಣ ಕ್ಷೇತ್ರಕ್ಕೆ ₹23.76 ಕೋಟಿ, ಗೃಹ ನಿರ್ಮಾಣ ಕ್ಷೇತ್ರಕ್ಕೆ ₹117.04 ಕೋಟಿ, ಸಾಮಾಜಿಕ ಮೂಲಸೌಕರ್ಯ ಕ್ಷೇತ್ರಕ್ಕೆ ₹29 ಕೋಟಿ, ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ₹14.03 ಕೋಟಿ, ಇತರ ಕ್ಷೇತ್ರಗಳಿಗೆ ₹92.93 ಕೋಟಿ ಗುರಿ ನಿಗದಿಪಡಿಸಲಾಗಿದೆ.

ವಿವಿಧ ಕ್ಷೇತ್ರಗಳ ಪ್ರಸ್ತುತ ಸ್ಥಿತಿಯನ್ನು ಹಾಗೂ ಶ್ರೇಣೀಕರಿಸಬಹುದಾದ ಸಾಧ್ಯತೆಯನ್ನು ವಿಶ್ಲೇಷಿಸಿ, ಬ್ಯಾಂಕ್ ಸಾಲದ ಮೂಲಕ ಅಭಿವೃದ್ಧಿಯ ಸಾಧ್ಯತೆಗಳನ್ನು ಗುರುತಿಸುವ ಉದ್ದೇಶದಿಂದ ವಿವಿಧ ಕ್ಷೇತ್ರಗಳ ಅಧಿಕಾರಿಗಳು ಮತ್ತು ಪ್ರಮುಖರೊಂದಿಗೆ ಚರ್ಚಿಸಿ ಈ ಪಿಎಲ್ಪಿ ತಯಾರಿಸಲಾಗಿದೆ.

ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಯುವರಾಜಕುಮಾರ ಆರ್.ಎಸ್., ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದ್ಗಲ್, ಎಲ್ಡಿಯಂನ ನಟರಾಜ್, ಎಸ್ಬಿಐ, ಕೆನರಾ ಬ್ಯಾಂಕ್, ಯುಬಿಐ, ಕೆಜಿಬಿ, ಬಳ್ಳಾರಿ ಡಿಸಿಸಿ ಬ್ಯಾಂಕ್ನ ಜಿಲ್ಲಾ ಸಂಯೋಜಕರು, ವಿವಿಧ ಇಲಾಖೆ ಮುಖ್ಯಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.