ಮಂಗಳವಾರ, ಮಾರ್ಚ್ 21, 2023
24 °C

ಹೊಸಪೇಟೆ: ನ್ಯಾಯಾಲಯದ ಆವರಣದಲ್ಲಿ ವಕೀಲ ತಾರಿಹಳ್ಳಿ ವೆಂಕಟೇಶ್ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯನಗರ (ಹೊಸಪೇಟೆ): ಇಲ್ಲಿನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಆವರಣದಲ್ಲಿ ಶನಿವಾರ ವಕೀಲ, ಕಾಂಗ್ರೆಸ್ ಮುಖಂಡ ತಾರಿಹಳ್ಳಿ ವೆಂಕಟೇಶ್ (48) ಅವರ ಹತ್ಯೆ ನಡೆದಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾರಿಹಳ್ಳಿ ಅವರ ಸಂಬಂಧಿ ಮನೋಜ್ ಎಂಬುವರು ಮಚ್ಚಿನಿಂದ ಕುತ್ತಿಗೆಯ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾರೆ. ಕುರ್ಚಿ ಮೇಲೆ  ಕುಳಿತುಕೊಂಡು ನೋಟರಿ ಮಾಡುತ್ತಿದ್ದಾಗ ತಾರಿಹಳ್ಳಿ ಅವರಿಗೆ ಏಕಾಏಕಿ ಬಂದು ಹೊಡೆದಿದ್ದಾನೆ. ಅವರ ದೇಹರಕ್ತಸಿಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಿಂದ ನ್ಯಾಯಾಲಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಗುಂಪುಗೂಡಿದ ಜನರನ್ನು ಪೊಲೀಸರು ಅಲ್ಲಿಂದ ಕಳುಹಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದರು. ಕೊಲೆ ಮಾಡಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು