ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ರೂಪಿಸುವಲ್ಲಿ ವಕೀಲರ ಕೊಡುಗೆ ಅಪಾರ: ಎಂ.ಭಾರತಿ

Published 4 ಡಿಸೆಂಬರ್ 2023, 14:03 IST
Last Updated 4 ಡಿಸೆಂಬರ್ 2023, 14:03 IST
ಅಕ್ಷರ ಗಾತ್ರ

ಹರಪನಹಳ್ಳಿ: ‘ಜಗತ್ತಿನ ಬಹುತೇಕ ತತ್ತ್ವಸಿದ್ಧಾಂತ, ಹಕ್ಕು ಮತ್ತು ಕರ್ತವ್ಯಗಳನ್ನು ಆಳವಾಗಿ ಅಧ್ಯಯನ ನಡೆಸಿ ಭಾರತಕ್ಕೆ ಶ್ರೇಷ್ಠ ಸಂವಿಧಾನ ರೂಪಿಸಿದ ಕೀರ್ತಿಯ ಸಿಂಹಪಾಲು ವಕೀಲ ವೃತ್ತಿಗೆ ಸಲ್ಲುತ್ತದೆ’ ಎಂದು ಹಿರಿಯ ಸಿವಿಲ್ ನ್ಯಾಯಧೀಶೆ ಎಂ.ಭಾರತಿ ಅಭಿಪ್ರಾಯಪಟ್ಟರು.

ಪಟ್ಟಣದ ವಕೀಲರ ಸಂಘದ ಆವರಣದಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ವಕೀಲರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಕಿರಿಯ ಸಿವಿಲ್ ನ್ಯಾಯಾಧೀಶ ಪಕ್ಕಿರವ್ವ ಕೆಳಗೇರಿ, ‘ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮತ್ತು ಸಂವಿಧಾನ ರಚನೆಯಲ್ಲಿ ಬಹುತೇಕ ವಕೀಲರ ಉಪಸ್ಥಿತಿ ಇತ್ತು. ಆ ಎಲ್ಲ ಮಹನೀಯರ ಸ್ಮರಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ’ ಎಂದು ಹೇಳಿದರು.

ಹಿರಿಯ ವಕೀಲ ಬಿ.ಕೃಷ್ಣಮೂರ್ತಿ, ಪಿ.ಜಗದೀಶ ಗೌಡ, ಚಿಗಟೇರಿ ವೀರಣ್ಣ, ಕೇಶವಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಅಪರ ಸರ್ಕಾರಿ ವಕೀಲ ವಿ.ಜಿ.ಪ್ರಕಾಶಗೌಡ, ಸರ್ಕಾರಿ ಅಭಿಯೋಜಕರಾದ ನಿರ್ಮಲ, ಮೀನಾಕ್ಷಿ, ಉಪಾಧ್ಯಕ್ಷ ಕೆ.ವಿರುಪಾಕ್ಷಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT