ಶನಿವಾರ, ಸೆಪ್ಟೆಂಬರ್ 18, 2021
21 °C

ಕುಷ್ಠರೋಗಿಗಳ ಪತ್ತೆಗೆ ಎರಡು ಸುತ್ತಿನ ಸಮೀಕ್ಷೆ: ಡಾ. ರಾಜಶೇಖರ ರೆಡ್ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ‘ಕುಷ್ಠ ರೋಗಿಗಳನ್ನು ಪತ್ತೆ ಹಚ್ಚಲು ಎರಡು ಸುತ್ತಿನ ಸಮೀಕ್ಷೆ ಕಾರ್ಯ ಕೈಗೊಳ್ಳಲು ನಿರ್ಧರಿಸಲಾಗಿದೆ’ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ರಾಜಶೇಖರ ರೆಡ್ಡಿ ತಿಳಿಸಿದರು.

ಮಂಗಳವಾರ ನಗರದ ತಾಲ್ಲೂಕು ಪಂಚಾಯಿತಿಯಲ್ಲಿ ನಡೆದ ಸಕ್ರಿಯ ಕುಷ್ಠರೋಗಿಗಳ ಪತ್ತೆ ಹೆಚ್ಚುವ ಕಾರ್ಯಕ್ರಮದ ತರಬೇತಿ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಆಗಸ್ಟ್‌, ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳಲ್ಲಿ ಮೊದಲ ಹಂತದ ಸಮೀಕ್ಷೆ ನಡೆಸಲಾಗುವುದು. ನವೆಂಬರ್‌ನಿಂದ ಜನವರಿ ವರೆಗೆ ಎರಡು ಸುತ್ತಿನ ಸಮೀಕ್ಷೆ ಕೈಗೊಳ್ಳಲಾಗುವುದು. ಮೂವರು ಆರೋಗ್ಯ ಕಾರ್ಯಕರ್ತರ ತಂಡ ಪ್ರತಿ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಲಿದೆ’ ಎಂದು ಹೇಳಿದರು.

ಡಾ.ಬಸವರಾಜ, ಡಾ.ಸತೀಶ, ಡಾ.ವಿನೋದ, ಡಾ.ದಿವ್ಯಶ್ರೀ, ಡಾ.ಶ್ರೀನಿವಾಸ, ಡಾ.ಅರುಣಕುಮಾರ, ಡಾ.ರೇವಣಸಿದ್ದ , ಡಾ.ರಾಧಿಕಾ, ಡಾ.ಪದ್ಮಾವತಿ, ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಂ.ಧರ್ಮನಗೌಡ, ಪ್ರಶಾಂತ, ಜಗನ್ನಾಥ, ಮಂಜುನಾಥ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು