ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗತ್ಯ ಸೇವೆ ಸಿಬ್ಬಂದಿಗೆ ಅಂಚೆ ಮತದಾನಕ್ಕೆ ಅವಕಾಶ: ಎಂ.ಎಸ್‌.ದಿವಾಕರ್

ವಿಡಿಯೊ ಕಾನ್‌ಫರೆನ್ಸ್: ವಿವಿಧ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ್ ಸೂಚನೆ
Published 29 ಮಾರ್ಚ್ 2024, 15:15 IST
Last Updated 29 ಮಾರ್ಚ್ 2024, 15:15 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಲೋಕಸಭಾ ಚುನಾವಣೆಯಲ್ಲಿ ಅಂಚೆ ಮತದಾನ ಮಾಡುವುದಕ್ಕೆ ಅಗತ್ಯ ಸೇವೆಗಳ ಸಿಬ್ಬಂದಿಗೆ ಹಾಗೂ ಖಾಸಗಿ ವಲಯಗಳ ಕೆಲವು ಸಿಬ್ಬಂದಿಗೆ ಅವಕಾಶ ಇದ್ದು, ಅದನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ್ ತಿಳಿಸಿದರು.

ತಮ್ಮ ಕಚೇರಿಯಲ್ಲಿ ಗುರುವಾರ ಸಂಜೆ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, ಪೊಲೀಸ್, ಕೆಎಸ್‌ಆರ್‌ಟಿಸಿ, ರೈಲ್ವೆ, ಆರೋಗ್ಯ ಇಲಾಖೆ, ಆಕಾಶವಾಣಿ, ಅಗ್ನಿಶಾಮಕ, ಆಂಬುಲೆನ್ಸ್ ಸೇವೆ ಸೇರಿದಂತೆ ವಿವಿಧ ಎವಿಇಎಸ್ ಕೆಟಗರಿಯವರಿಗೆ ಅಂಚೆ ಮತ ಚೀಟಿ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ನಿಗದಿತ ನಮೂನೆಯನ್ನು ಅರ್ಜಿ ಭರ್ತಿ ಮಾಡಿ ಅಂಚೆ ಮತಪತ್ರ ನೋಡಲ್ ಅಧಿಕಾರಿಗೆ ಸಲ್ಲಿಸುವ ಕಾರ್ಯವನ್ನು ಅತೀ ತುರ್ತಾಗಿ ಮಾಡಲು ಕ್ರಮ ವಹಿಸಬೇಕು ಎಂದರು.

ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಎಇಓ, ಎಟಿ, ಎಫ್‌ಎಸ್‌ಟಿ, ವಿಎಸ್‌ಟಿ, ವಿವಿಟಿ ತಂಡಗಳನ್ನು ರಚಿಸಿ ಆದೇಶಿಸಲಾಗಿದ್ದು ಈ ಎಲ್ಲ ತಂಡಗಳಲ್ಲಿನ ಅಧಿಕಾರಿಗಳು ಮುತುವರ್ಜಿವಹಿಸಿ ಕೆಲಸ ನಿರ್ವಹಿಸಬೇಕು. ಈಗಾಗಲೇ ಆರಂಭವಾಗಿರುವ ಕಂಟ್ರೊಲ್ ರೂಮ್, ದೂರು ಮೇಲ್ವಿಚಾರಣಾ ಕೇಂದ್ರ, ಮಾಧ್ಯಮ ಸೇರಿದಂತೆ ವಿವಿಧ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಯಾವುದೇ ಕಡೆಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳು ನಡೆಯದಂತೆ ಮುನ್ನೆಚ್ಚರಿಕೆ ಮತ್ತು ತಿಳಿವಳಿಕೆ ನೀಡಬೇಕು. ಸಭೆ-ಸಮಾರಂಭಗಳಿಗೆ ಅನುಮತಿ ಕೋರಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಕಡ್ಡಾಯವಾಗಿ ಷರತ್ತುಗಳನ್ನು ವಿಧಿಸಿ ಅನುಮತಿ ಪತ್ರ ನೀಡಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧಾ ಜಿ., ವಿವಿಧ ತಾಲ್ಲೂಕುಗಳ ತಹಶೀಲ್ದಾರರು ಮತ್ತು ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಇದ್ದರು.

‘ಕಾಸಿಗಾಗಿ ಸುದ್ದಿ–ನಿಗಾ ವಹಿಸಿ’

ಮಾಧ್ಯಮಗಳಲ್ಲಿ ಪ್ರಕಟವಾಗುವ ಕಾಸಿಗಾಗಿ ಸುದ್ದಿಗಳ ಮೇಲೆ ವಿಶೇಷ ನಿಗಾವಹಿಸಬೇಕು. ಜಿಲ್ಲಾಮಟ್ಟದ ಮಾಧ್ಯಮ ಪ್ರಮಾಣೀಕರಣ ಮತ್ತು ಉಸ್ತುವಾರಿ ಸಮಿತಿಗಳು ಪೇಡ್ ನ್ಯೂಸ್ ಸಾಪ್ತಾಹಿಕ ವರದಿಯನ್ನು ನಿಗದಿತ ಅವಧಿಯೊಳಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ  ಸೂಚಿಸಿದರು. ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣಾ ಕ್ರಮವನ್ನು ಬಿಗಿಗೊಳಿಸಬೇಕು. ₹50 ಸಾವಿರ ಅಥವಾ ಅದಕ್ಕಿಂತ ಹೆಚ್ಚು ಹಣ ಒಯ್ಯುವವರು ಸಮರ್ಪಕ ದಾಖಲೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಧರಿಸಿದ ಆಭರಣ ಹೊರತುಪಡಿಸಿ ದೊರೆಯುವ ಅಧಿಕ ಬೆಳೆಬಾಳುವ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲು ಕ್ರಮ ವಹಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT