ಹೊಸಪೇಟೆ (ವಿಜಯನಗರ): ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಡಿಎಚ್ಒ) ಡಾ.ಎಲ್.ಆರ್.ಶಂಕರ್ ನಾಯ್ಕ್ ಅವರ ಇಲ್ಲಿನ ಮನೆ, ಕಚೇರಿ ಮೇಲೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಡಿಎಚ್ಒ ಅವರು ಜಂಬುನಾಥ ರಸ್ತೆಯಲ್ಲಿ ತಮ್ಮ ಮನೆಯ ಸಮೀಪ ಖಾಸಗಿ ಆಸ್ಪತ್ರೆಯನ್ನು ಸಹ ನಡೆಸುತ್ತಿದ್ದು, ಲೋಕಾಯುಕ್ತ ಅಧಿಕಾರಿಗಳು ಅಲ್ಲಿಗೆ ಸಹ ತೆರಳಿ ಪರಿಶೀಲನೆ ನಡೆಸಿದರು. ಡಿಎಚ್ಒ ಅವರ ಪತ್ನಿ ಈ ಆಸ್ಪತ್ರೆಯ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ. ಅವರಿಂದ ಸಹ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಸುಕಿನಲ್ಲೇ ಆರಂಭವಾದ ಪರಿಶೀಲನೆ ಬೆಳಿಗ್ಗೆ 11.30ರ ವೇಳೆಗೂ ಮುಂದುವರಿದಿತ್ತು.

ವಿಜಯನಗರ ಲೋಕಾಯುಕ್ತ ಡಿವೈಎಸ್ಪಿ, ಸಚಿನ್, ಪಿಐ ಅಮರೇಶ್, ರಾಜೇಶ್ ಲಮಾಣಿ ಮತ್ತು ಕೊಪ್ಪಳ, ಬಳ್ಳಾರಿ ಲೋಕಾಯುಕ್ತ ಅಧಿಕಾರಿಗಳಿಂದ ಈ ದಾಳಿ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.