‘ಆಲೂರಿನ ಮನೆಯಲ್ಲಿ ರಾತ್ರಿ ಊಟ ಮುಗಿಸಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೆಂಗಳೂರು ಕಡೆಯಿಂದ ರಾಜಸ್ಥಾನದ ಕಡೆ ಹೊರಟಿದ್ದ ಲಾರಿ ಏಕಾಏಕಿ ಯುವಕರ ಮೇಲೆ ಹರಿದಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದು, ಮತ್ತೊಬ್ಬ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳು ಶಿವಕುಮಾರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾನಾಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.