ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲ್ಮೀಕಿ ಜಯಂತಿ: ಶ್ರೀರಾಮುಲು ಹೆಸರು ಸೇರಿಸಿ ಆಹ್ವಾನ ಪತ್ರಿಕೆ ಮರು ಮುದ್ರಣ

Last Updated 19 ಅಕ್ಟೋಬರ್ 2021, 12:54 IST
ಅಕ್ಷರ ಗಾತ್ರ

ಹೊಸಪೇಟೆ: ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ಅವರ ಹೆಸರು ಕೈಬಿಟ್ಟಿರುವುದಕ್ಕೆ ವಿರೋಧ ವ್ಯಕ್ತವಾಗಿದ್ದರಿಂದ ಜಿಲ್ಲಾಡಳಿತವು ಮಹರ್ಷಿ ವಾಲ್ಮೀಕಿ ಜಯಂತಿಯ ಆಹ್ವಾನ ಪತ್ರಿಕೆಯನ್ನು ಮರು ಮುದ್ರಣಗೊಳಿಸಿದೆ.

ಮರು ಮುದ್ರಿಸಿದ ಆಹ್ವಾನ ಪತ್ರಿಕೆಯಲ್ಲಿ ಶ್ರೀರಾಮುಲು ಅವರ ಹೆಸರನ್ನು ಸೇರಿಸಿ, ವಿರೋಧದ ದನಿ ಅಡಗುವಂತೆ ಮಾಡಿದೆ. ಜಿಲ್ಲೆಯ ಕೂಡ್ಲಿಗಿ, ಕಮಲಾಪುರ ಸೇರಿದಂತೆ ಹಲವೆಡೆ ವಾಲ್ಮೀಕಿ ನಾಯಕ ಸಮಾಜದವರು ಜಿಲ್ಲಾಡಳಿತದ ಕ್ರಮವನ್ನು ಟೀಕಿಸಿದ್ದರು. ಶ್ರೀರಾಮುಲು ಅವರ ಹೆಸರನ್ನು ಕೈಬಿಡುವ ಮೂಲಕ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ್ದರು. ಆಹ್ವಾನ ಪತ್ರಿಕೆ ಮರು ಮುದ್ರಿಸಬೇಕೆಂದು ಒತ್ತಾಯಿಸಿದ್ದರು. ಅದಕ್ಕೆ ಜಿಲ್ಲಾಡಳಿತ ಕೊನೆಗೂ ಮಣಿದಿದೆ.

ಜಿಲ್ಲಾಡಳಿತದಿಂದ ಬುಧವಾರ (ಅ. 20) ನಗರದ ಸಹಕಾರ ಕಲ್ಯಾಣ ಮಂಟಪದಲ್ಲಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT