ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯನಗರ: ಜಿಲ್ಲಾಡಳಿತದಿಂದ ಶ್ರಮದಾನ, ಪ್ರತಿಜ್ಞಾವಿಧಿ ಸ್ವೀಕಾರ

Published : 2 ಅಕ್ಟೋಬರ್ 2024, 15:57 IST
Last Updated : 2 ಅಕ್ಟೋಬರ್ 2024, 15:57 IST
ಫಾಲೋ ಮಾಡಿ
Comments

ಹೊಸಪೇಟೆ (ವಿಜಯನಗರ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಹಾಗೂ ಲಾಲಬಹದ್ದೂರ ಶಾಸ್ತ್ರೀಜಿಯವರ 121ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆಯಿತು.

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿಲ್ಲಾ ಪಂಚಾಯಿತಿ ಸಿಇಒ ನೋಂಗ್ಜಾಯ್ ಮಹಮದ್ ಅಲಿ ಅಕ್ರಂ ಶಾ, ಹೆಚ್ಚುವರಿ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ, ಉಪವಿಭಾಗಾಧಿಕಾರಿ ವಿವೇಕಾನಂದ ಪಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಭೀಮಪ್ಪ ಲಾಳಿ ಇತರರು ಮಹಾತ್ಮ ಗಾಂಧೀಜಿಯವರ ಹಾಗೂ ಲಾಲ ಬಹಾದ್ದೂರ್‌ ಶಾಸ್ತ್ರೀಜಿಯವರ ಭಾವಚಿತ್ರಗಳಿಗೆ ಪುಷ್ಪಾರ್ಪನೆ ಮಾಡಿ ಗೌರವ ಸಲ್ಲಿಸಿದರು.

ಸ್ವಚ್ಛತಾ ಪ್ರತಿಜ್ಞೆಯನ್ನು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್‌ ಬೋಧಿಸಿದರು.

ಶ್ರಮದಾನ ಕಾರ್ಯಕ್ರಮ: ಜಯಂತಿ ಹಿನ್ನೆಲೆಯಲ್ಲಿ ನಗರಸಭೆ, ನಗರಾಭಿವೃದ್ಧಿ ಕೋಶದ ಸಹಯೋಗದಲ್ಲಿ ಸ್ವಚ್ಛತಾ ನಡಿಗೆ ಕಾರ್ಯಕ್ರಮ ನಡೆಯಿತು.

ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ, ಎಸ್‌ಪಿ ಶ್ರೀಹರಿಬಾಬು ಬಿ.ಎಲ್‌. ಸಹಿತ ಹಿರಿಯ ಅಧಿಕಾರಿಗಳು ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT