ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಕೇಂದ್ರ ಯೋಜನೆ ಸದುಪಯೋಗಪಡಿಸಿಕೊಳ್ಳಿ’

ಪೋಷಣ ಅಭಿಯಾನ, ವಿವಿಧ ಯೋಜನೆ ಜಾಗೃತಿ ಕಾರ್ಯಕ್ರಮ
Published : 24 ಸೆಪ್ಟೆಂಬರ್ 2024, 14:42 IST
Last Updated : 24 ಸೆಪ್ಟೆಂಬರ್ 2024, 14:42 IST
ಫಾಲೋ ಮಾಡಿ
Comments

ಹೂವಿನಹಡಗಲಿ: ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ಜನೋಪಯೋಗಿ ಯೋಜನೆಗಳನ್ನು ಬಡವರು, ಜನಸಾಮಾನ್ಯರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಎಲ್.ಕೃಷ್ಣನಾಯ್ಕ ಹೇಳಿದರು.

ಪಟ್ಟಣದ ಪಂಚಮಸಾಲಿ ಭವನದಲ್ಲಿ ಮಂಗಳವಾರ ಕೇಂದ್ರ ಸಂವಹನ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಪೋಷಣ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಆಯುಷ್ಮಾನ್ ಭಾರತ ಯೋಜನೆಯಡಿ ಹಿರಿಯ ನಾಗರಿಕರಿಗೆ ₹5 ಲಕ್ಷ  ಆರೋಗ್ಯ ವಿಮೆ ದೊರೆಯಲಿದೆ. ಸೂರಿಲ್ಲದ ಬಡವರು ಪಿಎಂ ಆವಾಸ್ ಯೋಜನೆಯಡಿ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ಸಲ್ಲಿಸಿದರೆ ರೋಸ್ಟರ್ ಪದ್ದತಿಯಡಿ ಸರ್ಕಾರ ನೇರವಾಗಿ ಆಯ್ಕೆ ಮಾಡುತ್ತದೆ. ಬ್ರಿಟಿಷ್ ಕಾಲದ ಕಾನೂನುಗಳನ್ನು ತಿದ್ದುಪಡಿಗೊಳಿಸಿ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೊಳಿಸಲಾಗಿದೆ. ಮನೆಯಿಂದಲೇ ಆನ್ ಲೈನ್ ನಲ್ಲಿ ದೂರು ಸಲ್ಲಿಸುವ ವ್ಯವಸ್ಥೆ ಇದೆ. ಈ ಎಲ್ಲ ಯೋಜನೆಗಳ ಪ್ರಯೋಜನ ಪಡೆದು ಬದುಕು ರೂಪಿಸಿಕೊಳ್ಳಿ’ ಎಂದು ತಿಳಿಸಿದರು.

ಕೇಂದ್ರ ಸಂವಹನ ಇಲಾಖೆ ಹೆಚ್ಚುವರಿ ಮಹಾ ನಿರ್ದೇಶಕ ಎಸ್.ಜಿ.ರವೀಂದ್ರ ಮಾತನಾಡಿ, ‘ಮಹಿಳೆಯರ, ಮಕ್ಕಳ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಅಭಿಯಾನ ಹಮ್ಮಿಕೊಂಡಿದೆ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಅರ್ಹರು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಎಸ್.ಶ್ವೇತಾ ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶಂಕರನಾಯ್ಕ, ಡಾ. ಬಿ. ಶಿವಕುಮಾರ್, ಮುಖಂಡರಾದ ಎಂ.ಪರಮೇಶ್ವರಪ್ಪ, ವಾರದ ಗೌಸ್ ಮೊಹಿದ್ದೀನ್, ಎಚ್.ಪೂಜಪ್ಪ, ಹಣ್ಣಿ ಶಶಿಧರ, ಎನ್.ಕೋಟೆಪ್ಪ, ಬೀರಬ್ಬಿ‌ ಬಸವರಾಜ, ಬಿ.ತೋಟನಾಯ್ಕ, ಕೆ.ಸುರೇಶ, ವಿಶ್ವನಾಥ ಮಂತ್ರೋಡಿ, ಕಣದಾಳ ಶಂಕ್ರಪ್ಪ, ಪುರಸಭೆ ಸದಸ್ಯೆ ಶಾಂತಮ್ಮ ಇದ್ದರು.

ಹೂವಿನಹಡಗಲಿಯಲ್ಲಿ ವಿವಿಧ ಇಲಾಖೆಗಳು ಹಮ್ಮಿಕೊಂಡಿದ್ದ ಪೋಷಣ ಅಭಿಯಾನ ಉದ್ಘಾಟಿಸಿ ಶಾಸಕ ಎಲ್.ಕೃಷ್ಣನಾಯ್ಕ ಮಾತನಾಡಿದರು.
ಹೂವಿನಹಡಗಲಿಯಲ್ಲಿ ವಿವಿಧ ಇಲಾಖೆಗಳು ಹಮ್ಮಿಕೊಂಡಿದ್ದ ಪೋಷಣ ಅಭಿಯಾನ ಉದ್ಘಾಟಿಸಿ ಶಾಸಕ ಎಲ್.ಕೃಷ್ಣನಾಯ್ಕ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT