ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್‌ ಪಲ್ಟಿ: 10ಕ್ಕೂ ಹೆಚ್ಚು ಜನರಿಗೆ ಗಾಯ

Published 26 ಸೆಪ್ಟೆಂಬರ್ 2023, 3:04 IST
Last Updated 26 ಸೆಪ್ಟೆಂಬರ್ 2023, 3:04 IST
ಅಕ್ಷರ ಗಾತ್ರ

ಕಾನಹೊಸಹಳ್ಳಿ (ವಿಜಯನಗರ ಜಿಲ್ಲೆ): ಸಮೀಪದ ‌ಎಂ.ಬಿ.ಅಯ್ಯನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಂಗಳವಾರ ನಸುಕಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಉರುಳಿ ಬಿದ್ದಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ಶ್ರೀ ಸಾಯಿ ಸ್ಲೀಪರ್ ಬಸ್ ಉರುಳಿಬಿದ್ದು ಈ ದುರಂತ ಸಂಭವಿಸಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳನ್ನು ಕೂಡ್ಲಿಗಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಾನಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT