ಮರಿಯಮ್ಮನಹಳ್ಳಿ: ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಆರು ಜನ ತೀವ್ರ ಗಾಯಗೊಂಡ ಘಟನೆ ಪಟ್ಟಣ ಹೊರವಲಯದ ಕೆಪಿಟಿಸಿಲ್ ಕಚೇರಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ -50ರಲ್ಲಿ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಡೆದಿದೆ.

ಬಾಗಲಕೋಟ ಜಿಲ್ಲೆ ಬಾದಾಮಿ ತಾಲ್ಲೂಕಿನ ಗೋವಿನಕೊಪ್ಪ ಹಾಗೂ ಕೊಣ್ಣೂರು ಗ್ರಾಮದ ಡ್ರಮ್ ಸೆಟ್ ಬಾರಿಸುವ ಕಲಾವಿದರಾದ ಕುಮಾರ್, ಅನ್ನಪೂರ್ಣ, ಟ್ರಕ್ ಚಾಲಕ ಲಾಲ್ ಸಾಬ್, ಬಾಲಕಿಯರಾದ ರಕ್ಷಿತ, ಅಕ್ಕಮ್ಮ, ನಂದಿನಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾದಾಮಿ ತಾಲ್ಲೂಕಿನ ಗೋವಿನಕೊಪ್ಪ ಹಾಗೂ ಕೊಣ್ಣೂರು ಗ್ರಾಮದ ಒಟ್ಟು 13ಜನ ಡ್ರಮ್ ಸೆಟ್ (ಡೋಲು) ಬಾರಿಸುವ ಕಲಾವಿದರು ಮಡಿಕೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡೋಲು ಬಾರಿಸಲು ತೆರಳಿದ್ದರು.

ಗುರುವಾರ ಕಾರ್ಯಕ್ರಮ ಮುಗಿಸಿಕೊಂಡು ರಾತ್ರಿ ಊರಿಗೆ ಮರಳುತ್ತಿದ್ದರು. ಶುಕ್ರವಾರ ಹುನುಗುಂದದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಪಟ್ಟಣ ಹೊರವಲಯದಲ್ಲಿ ಹೆದ್ದಾರಿ ಬದಿ ನಿಂತಿದ್ದ ಲಾರಿಯೊಂದು ರಸ್ತೆ ತಿರುವು ಪಡೆಯುವ ಸಮಯದಲ್ಲಿ ವೇಗವಾಗಿ ಬರುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತ ಸ್ಥಳಕ್ಕೆ ಪಟ್ಟಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.