ಮಂಗಳವಾರ, ಸೆಪ್ಟೆಂಬರ್ 21, 2021
29 °C

‘ಆ.14ಕ್ಕೆ ಮೆಗಾ ಲೋಕ್‌ ಅದಾಲತ್‌’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ‘ಆ. 15ರಂದು ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ನಗರದ ನ್ಯಾಯಾಲಯದ ಆವರಣದಲ್ಲಿ ಮೆಗಾ ಲೋಕ್‌ ಅದಾಲತ್‌ ಹಮ್ಮಿಕೊಳ್ಳಲಾಗಿದೆ’ ಎಂದು ಇಲ್ಲಿನ ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶ ಪದ್ಮಪ್ರಸಾದ್ ತಿಳಿಸಿದರು.

‘ವರ್ಷದಲ್ಲಿ ಮೂರು ಬಾರಿ ಲೋಕ್‌ ಅದಾಲತ್ ಆಯೋಜಿಸಲಾಗುತ್ತದೆ. ಪಾಲು ವ್ಯಾಜ್ಯ, ಕೌಟುಂಬಿಕ ಕಲಹ, ಚೆಕ್‍ಬೌನ್ಸ್, ಹಲ್ಲೆ, ಜೀವನಾಂಶ ಪ್ರಕರಣ, ಆಸ್ತಿ ಭಾಗ ಪ್ರಕರಣಗಳನ್ನು ರಾಜಿ ಮೂಲಕ ಬಗೆಹರಿಸಲಾಗುತ್ತದೆ. ಕಳೆದ ಬಾರಿ ನಡೆದ ಲೋಕ್‌ ಅದಾಲತ್‍ನಲ್ಲಿ 560 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿತ್ತು’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಅದಾಲತ್‍ನಲ್ಲಿ ಸಂಧಾನದ ಮೂಲಕ ಬಗೆಹರಿಯಬಹುದಾದ ಪ್ರಕರಣಗಳನ್ನು ಮಾತ್ರ ಕೈಗೆತ್ತಿಕೊಂಡು ಪರಿಹರಿಸುವ ಕೆಲಸ ಮಾಡಲಾಗುವುದು. ನ್ಯಾಯಾಲಯದಲ್ಲಿ ರಾಜ್ಯ ಕಾನೂನು ಪ್ರಾಧಿಕಾರದ ವತಿಯಿಂದ ನೇಮಕಗೊಂಡ ಒಂಬತ್ತು ಜನ ವಕೀಲರು ರಾಜಿ ಮಾಡುವ ಕುರಿತು ತರಬೇತಿ ಪಡೆದಿದ್ದಾರೆ. ಅವರಿಂದ ಬಹುತೇಕ ಪ್ರಕರಣಗಳು ಇತ್ಯರ್ಥ ಕಂಡಿವೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಕಿಶನ್ ಬಿ.ಮಾಡಲಗಿ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ ತಾರಿಹಳ್ಳಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು