ಶುಕ್ರವಾರ, ಡಿಸೆಂಬರ್ 2, 2022
22 °C

ಕೂಡ್ಲಿಗಿ ಮಿನಿ ವಿಧಾನಸೌಧ ಉದ್ಘಾಟಿಸಿದ ಸಚಿವ ಅಶೋಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಕಂದಾಯ ಸಚಿವ ಆರ್. ಅಶೋಕ್ ಅವರು ಜಿಲ್ಲೆಯ ಕೂಡ್ಲಿಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಚಾಲನೆ ನೀಡಿದರು.

₹10 ಕೋಟಿಯಲ್ಲಿ ನಿರ್ಮಿಸಿರುವ ಮಿನಿ ವಿಧಾನಸೌಧ, ₹3 ಕೋಟಿಯಲ್ಲಿ ಮಹಾದೇವ ಮೈಲಾರ ಕ್ರೀಡಾಂಗಣ, ₹1.80 ಕೋಟಿಯ ಪಟ್ಟಣ ಪಂಚಾಯಿತಿ ನೂತನ ಕಟ್ಟಡ, ₹1.50 ಕೋಟಿ ಯ ಮಹರ್ಷಿ ವಾಲ್ಮೀಕಿ ಭವನ, ₹1.40 ಕೋಟಿಯ ಗುರು ಭವನ ಉದ್ಘಾಟಿಸಿದರು.

ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಸಾರಿಗೆ ಸಚಿವ ಬಿ. ಶ್ರೀರಾಮುಲು, ಸ್ಥಳೀಯ ಶಾಸಕ ಎನ್.ವೈ. ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ., ಜಿಲ್ಲಾ ಪಂಚಾಯಿತಿ ಸಿಇಒ ಹರ್ಷಲ್ ಭೋಯರ್ ಇತರರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು