ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಗೆ ಬೆಂಗಳೂರಿನಲ್ಲಿ ಸಹಜವಾಗಿ ಗುಂಡಿಗಳು ಬಿದ್ದಿವೆ–ಸಚಿವ ಅಶ್ವತ್ಥನಾರಾಯಣ

Last Updated 4 ನವೆಂಬರ್ 2022, 8:33 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ನಿರಂತರ ಮಳೆ ಬೀಳುತ್ತಿರುವುದರಿಂದ ಬೆಂಗಳೂರಿನಲ್ಲಿ ಸಹಜವಾಗಿ ಗುಂಡಿಗಳು ಬಿದ್ದಿವೆ’ ಎಂದು ಉನ್ನತ ಶಿಕ್ಷಣ ಹಾಗೂ ಐ.ಟಿ., ಬಿ.ಟಿ. ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಶುಕ್ರವಾರ ಹಂಪಿಯಲ್ಲಿ ಆಯೋಜಿಸಿದ್ದ ಮೃತ್ತಿಕೆ ಸಂಗ್ರಹ ಕಾರ್ಯಿಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಗ್ರ ಬೆಂಗಳೂರಿನ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿವೆ. ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ ನಡೆಸಲಾಗುತ್ತಿದೆ. ರಸ್ತೆಯಲ್ಲೇ ನೀರು, ಒಳಚರಂಡಿ, ಕೇಬಲ್‌ಗಳು ಹಾದು ಹೋಗಿರುವುದರಿಂದ ಸ್ವಲ್ಪ ಸಮಸ್ಯೆಯಾಗುತ್ತಿದೆ. ಆದರೆ, ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದರು.

ಕಾಂಗ್ರೆಸ್‌ ಪಕ್ಷ ಹಾಗೂ ಅದರ ನಾಯಕರು ಸಂಪೂರ್ಣ ಭ್ರಷ್ಟರು. ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ರಾಮನಗರದಲ್ಲೂ ಕೆಲವರ ಮೂಲಕ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸದ್ಯ ಯಾವುದೇ ಹೊಸ ಪದವಿ ಕಾಲೇಜು ಆರಂಭಿಸುವುದಿಲ್ಲ.ಈಗಿರುವ ಕಾಲೇಜುಗಳಲ್ಲಿ ಅಗತ್ಯ ಸೌಕರ್ಯ ಕಲ್ಪಿಸಲು ಹೆಚ್ಚು ಒತ್ತು ಕೊಡಲಾಗುವುದು. ಹೊಸಪೇಟೆಯಲ್ಲಿ ಪದವಿ ಮಹಿಳಾ ಕಾಲೇಜು ಸ್ಥಾಪಿಸಬೇಕೆಂಬ ಬೇಡಿಕೆ ಬಗ್ಗೆ ಬರುವ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT