ಹೊಸಪೇಟೆ (ವಿಜಯನಗರ): ಹೊಸಪೇಟೆಯಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾಗಿ ನೂತನವಾಗಿ 20 ಕೊಠಡಿಗಳ ಹೈಟೆಕ್ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶೀಘ್ರ ಕ್ರಮವಹಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಿಕಿಹೊಳಿ ಹೇಳಿದರು.

ಇಲ್ಲಿ ಮಂಗಳವಾರ ಇಲಾಖೆಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಇಲಾಖೆಯ ಯಾವುದೇ ಕಾಮಗಾರಿಗಳು ಕಳಪೆ ಗುಣಮಟ್ಟ, ನಿರ್ಲಕ್ಷ್ಯ, ವಿಳಂಬ ಆಗದಂತೆ ಪೂರ್ಣಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ಒದಗಿಸಬೇಕು. ಈಗಾಗಲೇ ರಾಜ್ಯದಲ್ಲಿ ಗಡಿ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ನೆರೆ ರಾಜ್ಯದ ರಸ್ತೆಗಳಿಗೂ, ನಮ್ಮ ರಾಜ್ಯದ ರಸ್ತೆಗಳಿಗೆ ಹೋಲಿಕೆ ಮಾಡದಂತೆ ಹೆಚ್ಚಿನ ಗುಣಮಟ್ಟದಲ್ಲಿ ರಸ್ತೆ ಅಭಿವೃದ್ಧಿಗೆ ಅನುದಾನ ಕಲ್ಪಿಸಲಾಗಿದೆ’ ಎಂದರು.

ಜಿಲ್ಲೆಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇಲ್ಲ. ಎಲ್ಲಾ ಎಇಇ, ಇಇ ಹೆಚ್ಚಿನ ಮುತುವರ್ಜಿ ವಹಿಸಿ ವಿಳಂಬ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸಚಿವರು ಸೂಚಿಸಿದರು.

ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಮಾತನಾಡಿ, ಉಜ್ಜಿನಿ ಮತ್ತು ಗುಡೆಕೋಟೆಯಲ್ಲಿ ಪ್ರವಾಸಿ ಮಂದಿರ ನಿರ್ಮಾಣದ ಅಗತ್ಯವಿದೆ. ಹೊಸಹಳ್ಳಿ, ಇಮಾಡಪುರ, ಬಣವಿಕಲ್ಲು ಗ್ರಾಮದಲ್ಲಿ ಚತುಷ್ಪತ ರಸ್ತೆ ನಿರ್ಮಾಣ, ಪಟ್ಟಣದಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಕುರಿತು ಅಹವಾಲು ಸಲ್ಲಿಸಿದರು.

ಹಗರಿಬೊಮ್ಮನಹಳ್ಳಿ ಶಾಸಕ ಕೆ.ನೇಮಿರಾಜ ನಾಯ್ಕ ಮಾತನಾಡಿ, ಕೊಟ್ಟೂರು ನೂತನ ತಾಲ್ಲೂಕಾದ ಕಾರಣ ಪ್ರತ್ಯೇಕವಾಗಿ ಪಿಡಬ್ಲೂಡಿ ಕಚೇರಿ ಆರಂಭಿಸಲು ಕ್ರಮ ವಹಿಸಬೇಕು. ಮಲ್ಲನಾಯಕನಹಳ್ಳಿ ಗ್ರಾಮದ ರಸ್ತೆ ಮಾರ್ಗಕ್ಕೆ ಅಂದಾಜು ₹2 ಕೋಟಿ ಅನುದಾನ ನೀಡಬೇಕು ಎಂದರು.

2 ತಿಂಗಳಿಗೊಮ್ಮೆ ಪಿಡಬ್ಲೂಡಿ ಅಧಿಕಾರಿಗಳು ಅಯಾ ಶಾಸಕರ ನೇತೃತ್ವದಲ್ಲಿ ಕಾಮಗಾರಿಗಳ ಪ್ರಗತಿ ಸಭೆ ನಡೆಸಿ ಅಗತ್ಯವಿರುವ ಕಾಮಗಾರಿಗಳ ಕ್ರಿಯಾಯೋಜನೆ ಕುರಿತು ವರದಿ ಸಲ್ಲಿಸಬೇಕು
ಸತೀಶ್ ಜಾರಕಿಹೊಳಿ, ಲೋಕೋಪಯೋಗಿ ಸಚಿವ

ಶಾಸಕ ಎಚ್.ಆರ್.ಗವಿಯಪ್ಪ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಕಡೆ ಸೇವಾ ರಸ್ತೆಗಳಿಲ್ಲದ ಕಾರಣ ದ್ವಿಚಕ್ರವಾಹನದಲ್ಲಿ ತಿರುಗಾಡುವ ಹೆಚ್ಚಿನ ಕಾರ್ಮಿಕರು ಅಪಘಾತದಲ್ಲಿ ಮರಣಹೊಂದಿದ್ದಾರೆ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೇವಾರಸ್ತೆಗಳನ್ನು ನಿರ್ಮಿಸಬೇಕು. ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ನ್ಯಾಯಾಲಯ ನಿರ್ಮಾಣಕ್ಕೆ 10 ಎಕರೆ ಜಾಗ ನೀಡಿದ್ದು ಇದರ ನಿರ್ಮಾಣಕ್ಕೆ ಅನುದಾನ ಒದಗಿಸಬೇಕೆಂದು ಮನವಿ ಮಾಡಿದರು.

ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್, ಹಡಗಲಿ ಶಾಸಕ ಕೃಷ್ಣನಾಯ್ಕ್ ಅವರು ರಾಜ್ಯ ಹಾಗೂ ಜಿಲ್ಲಾ ರಸ್ತೆಗಳು ಹಾಳಾಗಿದ್ದರಿಂದ ಹೆಚ್ಚಿನ ಅನುದಾನ ನೀಡಲು ಮನವಿ ಮಾಡಿದರು.

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಇಲಾಖೆಯ ಮುಖ್ಯ ಎಂಜಿನಿಯರ್ ಶರಣಪ್ಪ ಸೂಲಗುಂಟಿ, ಅಧೀಕ್ಷಕ ಎಂಜಿನಿಯರ್ ಅಮೀನ್ ಮುಕ್ತಾರ್, ಇಇ ದೇವದಾಸ್, ಎಇಇ ರವಿ ನಾಯ್ಕ್ ಇತರರು ಇದ್ದರು.

ಶಿವಮೊಗ್ಗ ಪಿಪಿಪಿ ರಸ್ತೆ

ಮರಿಯಮ್ಮನಹಳ್ಳಿ-ಶಿವಮೊಗ್ಗ ಪಿಪಿಪಿ ರಸ್ತೆ; ಮರಿಯಮ್ಮನಹಳ್ಳಿ-ಹಗರಿಬೊಮ್ಮನಹಳ್ಳಿ- ಹರಪನಹಳ್ಳಿ-ಹರಿಹರ-ಮಲೇಬೆನ್ನೂರು-ಶಿ ವಮೊಗ್ಗ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವ ಕೆಲಸವನ್ನು ಕೇಂದ್ರ ಕೈಬಿಟ್ಟಿದೆ. ಪ್ರಸ್ತುತ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದನ್ನು ಖಾಸಗಿ ಸಹಭಾಗಿತ್ವದಲ್ಲಿ ರಸ್ತೆ ಅಭಿವೃದ್ದಿ ಮಾಡಿ ಶುಲ್ಕ ಸಂಗ್ರಹಿಸುವ ಖಾಸಗಿಯವರಿಂದ ನಿರ್ಮಾಣ ಮಾಡಲು ಟೆಂಡರ್ ಕರೆಯಲಾಗಿದೆ. 12 ರಾಜ್ಯಗಳಲ್ಲಿ ಟೆಂಡರ್ ಕರೆಯಲಾಗಿದ್ದು ಟೆಂಡರ್ ಅಂತಿಮವಾಗಿರುವುದಿಲ್ಲ. ಮುಂದಿನ ದಿನಗಳಲ್ಲಿ ಈ ರಸ್ತೆಯನ್ನು ಅಭಿವೃದ್ದಿ ಮಾಡಲಾಗುತ್ತದೆ ಎಂದು ಸಚಿವರು ತಿಳಿಸಿದರು. ರಸ್ತೆ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಎನ್ಎಚ್ಎಐ ಅಧಿಕಾರಿಗಳು ಮತ್ತು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಡೆಯುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಗೆ ಸಮಸ್ಯೆಗಳಿರುವ ಶಾಸಕರನ್ನು ಆಹ್ವಾನಿಸಲಾಗುತ್ತದೆ. ಸಮಸ್ಯೆ ನಿವಾರಣೆಗೆ ಇದರಿಂದ ಅನುಕೂಲವಾಗಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.