ಕೂಡ್ಲಿಗಿ: ಶ್ರಮಿಕ ವರ್ಗದ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ವಸತಿ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.

ಪಟ್ಟಣದ ವಾಲ್ಮೀಕಿ ಭವನದಲ್ಲಿ ಉದ್ಯೋಗದಾತರಿಗೆ, ಗುತ್ತಿಗೆ ಮತ್ತು ಹೊರಗುತ್ತಿಗೆದಾರರಿಗೆ, ವಿವಿಧ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ಕಾನೂನುಗಳು ಮತ್ತು ಯೋಜನೆಗಳ ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ರೂಪಿಸಿವೆ. ಆದರೆ ಮಾಹಿತಿ ಕೊರತೆಯಿಂದ ಕಾರ್ಮಿಕರಿಗೆ ಅವುಗಳು ಸರಿಯಾಗಿ ಜನರಿಗೆ ತಲುಪುತ್ತಿಲ್ಲ. ಆದ್ದರಿಂದ ಕಾರ್ಮಿಕ ಇಲಾಖೆಯಿಂದ ಇಂತಹ ಕಾರ್ಯಾಗಾರ ನಡೆಸುವ ಮೂಲಕ ಅವರಿಗೆ ಜಾಗೃತಿ ಮೂಡಿಸಬೇಕಾಗಿದೆ. ಕಾರ್ಮಿಕರು ಇ–ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಸರ್ಕಾರದಿಂದ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಜೊತೆಗೆ ಅವರ ಮಕ್ಕಳಿಗ ಶಿಕ್ಷಣಕ್ಕೆ ಬೇಕಾಗುವ ಎಲ್ಲಾ ಯೋಜನೆಗಳು ತಲುಪಲಿವೆ. ಇವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು’ ಎಂದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಾವಲ್ಲಿ ಶಿವಪ್ಪ ನಾಯಕ, ಕೊಪ್ಪಳ ಜಿಲ್ಲಾ ಕಾರ್ಮಿಕಾಧಿಕಾರಿ ಸುಧಾ ಗರಗ್, ಕೂಡ್ಲಿಗಿ ತಾಲ್ಲೂಕು ಕಾರ್ಮಿಕ ನಿರೀಕ್ಷಕಿ ಮಂಜುಳ ವಿಶ್ವನಾಥ, ಹಡಗಲಿಯ ಮೌನೇಶ್, ಬಾಲ ಕಾರ್ಮಿಕ ನಿವಾರಣಾಧಿಕಾರಿ ಪಿ.ಎಂ. ಈಶ್ವರಯ್ಯ, ತಾಲ್ಲೂಕು ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಖಜಾಂಚಿ ಸಂತೋಷ್ ಮಿಸ್ಕಿನ್, ಕಾರ್ಮಿಕ ಸಂಘಟನೆಗಳ ಅಧ್ಯಕ್ಷರಾದ ಯು. ಪೆನ್ನಪ್ಪ, ಕೆ. ಕರಿಯಪ್ಪ, ಸಿದ್ದಪ್ಪ, ಅಬ್ಬಯನಾಯ್ದು, ಸಂಘದ ಅಧ್ಯಕ್ಷ ಹನುಮಂತಪ್ಪ, ಸಿಬ್ಬಂದಿಗಲಾದ ಸೂರ್ಯಕಾಂತ್, ಶ್ರೀನಿವಾಸ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.