ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂವಿನಹಡಗಲಿ: ರೈತ ಸಂಪರ್ಕ ಕೇಂದ್ರಕ್ಕೆ ಶಾಸಕ ಭೇಟಿ

Published 3 ಜೂನ್ 2023, 14:06 IST
Last Updated 3 ಜೂನ್ 2023, 14:06 IST
ಅಕ್ಷರ ಗಾತ್ರ

ಹೂವಿನಹಡಗಲಿ: ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ಶಾಸಕ ಕೃಷ್ಣನಾಯ್ಕ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.

‘ರೈತರ ಬೇಡಿಕೆ ಇರುವ ಎಲ್ಲ ವಿಧದ ಬಿತ್ತನೆ ಬೀಜ, ರಸಗೊಬ್ಬರವನ್ನು ದಾಸ್ತಾನು ಮಾಡಿಕೊಂಡು, ಸಮರ್ಪಕ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಹೆಚ್ಚುವರಿ ಬೀಜ, ಗೊಬ್ಬರದ ಬೇಡಿಕೆ ಇದ್ದಲ್ಲಿ ಕೃಷಿ ಸಚಿವರನ್ನು ಸಂಪರ್ಕಿಸಿ ಕೊಡಿಸುತ್ತೇವೆ. ರೈತರಿಗೆ ಯಾವುದೇ ರೀತಿಯಲ್ಲಿ ಅನಾನುಕೂಲ ಆಗದಂತೆ ನಿಗಾ ವಹಿಸಿ’ ಎಂದು ಶಾಸಕರು ಸೂಚಿಸಿದರು.

‘ಮುಂಗಾರು ಬಿತ್ತನೆ ಕ್ಷೇತ್ರಕ್ಕೆ ಅಗತ್ಯವಿರುವಷ್ಟು ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮಾಡಿಕೊಂಡಿದ್ದೇವೆ. ಮೂರು ರೈತ ಸಂಪರ್ಕ ಕೇಂದ್ರಗಳಲ್ಲದೇ ನಾಲ್ಕು ಹೆಚ್ಚುವರಿ ಬೀಜ ಮಾರಾಟ ಕೇಂದ್ರ ತೆರೆದಿದ್ದೇವೆ’ ಎಂದು ಸಹಾಯಕ ಕೃಷಿ ನಿರ್ದೇಶಕ ಮಹ್ಮದ್ ಆಶ್ರಫ್ ತಿಳಿಸಿದರು. ತಹಶೀಲ್ದಾರ್ ಕೆ.ಶರಣಮ್ಮ, ಕೃಷಿ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT