ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೊಹಮ್ಮದ್‌ ಅಲಿ ಅಕ್ರಂ ಷಾ ಜಿ.ಪಂ.ನೂತನ ಸಿಇಒ

Published 5 ಜುಲೈ 2024, 13:33 IST
Last Updated 5 ಜುಲೈ 2024, 13:33 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇದುವರೆಗೆ ಹೊಸಪೇಟೆ ಉಪವಿಭಾಗದ ಹಿರಿಯ ಉಪವಿಭಾಗಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ ಅವರು ವಿಜಯನಗರ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಸಿಇಒ ಸದಾಶಿವ ಪ್ರಭು ಬಿ. ಅವರು ನೂತನ ಸಿಇಒ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಸದಾಶಿವ ಪ್ರಭು ಅವರಿಗೆ ಸದ್ಯ ಯಾವುದೇ ಹುದ್ದೆ ತೋರಿಸಿಲ್ಲ.

2020ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿರುವ ಮೊಹಮ್ಮದ್ ಅಲಿ ಅಕ್ರಮ್ ಶಾ ಅವರು ಮೂಲತಃ ಮಣಿಪುರ ರಾಜ್ಯದ ಇಂಪಾಲದವರು. ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್ ಅಧ್ಯಯನ ಮಾಡಿದ್ದಾರೆ. ಇವರು ಒಂದು ವರ್ಷದಿಂದ ಉಪವಿಭಾಗಾಧಿಕಾರಿಯಾಗಿದ್ದರು.

ಎಡಿಸಿ–ಸಿದ್ದರಾಮೇಶ್ವರ: ಬಳ್ಳಾರಿಯ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (ವಿಮ್ಸ್‌) ಅಧಿಕಾರಿಯಾಗಿದ್ದ ಸಿದ್ದರಾಮೇಶ್ವರ ಅವರನ್ನು ವಿಜಯನಗರ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯನ್ನಾಗಿ ನಿಯುಕ್ತಿಗೊಳಿಸಲಾಗಿದೆ. ಇದುವರೆಗೆ ಈ ಹುದ್ದೆಯಲ್ಲಿದ್ದ ಅನುರಾಧಾ ಜಿ. ಅವರಿಗೆ ಸದ್ಯ ಯಾವುದೇ ಹುದ್ದೆ ತೋರಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT