ಹೊಸಪೇಟೆ (ವಿಜಯನಗರ ಜಿಲ್ಲೆ): ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹5.26 ಲಕ್ಷ ನಗದು ಹಣವನ್ನು ಕೂಡ್ಲಿಗಿ ತಾಲ್ಲೂಕಿನ ಕಾನಹೊಸಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರ ಬಳಿಯ ಚೆಕಪೋಸ್ಟ್ ನಲ್ಲಿ ಚುನಾವಣಾ ಸಿಬ್ಬಂದಿ ಶುಕ್ರವಾರ ವಶಕ್ಕೆ ಪಡೆದಿದ್ದಾರೆ.
‘ಚಿಕ್ಕಬಳ್ಳಾಪುರದ ನರಸೆಗೌಡ ಎಂಬುವರು ಇತರೆ ನಾಲ್ಕು ಜನರೊಂದಿಗೆ ಬೊಲೊರೊ ಸರಕು ಸಾಗಣೆ ವಾಹನದಲ್ಲಿ ಶುಕ್ರವಾರ ಹೆದ್ದಾರಿ ಮೂಲಕ ತೆರಳುತ್ತಿದ್ದರು. ವಾಹನ ತಡೆದು ಪರಿಶೀಲಿಸಿದಾಗ ಬ್ಯಾಗ್‌ನಲ್ಲಿ ಹಣ ಪತ್ತೆಯಾಗಿದೆ. ಅದಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳು ಅವರ ಬಳಿಯಿರಲಿಲ್ಲ. ಹಣ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.