ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಾಮಾನ್ಯ ವರ್ಗದಿಂದ ಹೆಚ್ಚು ಮಹಿಳಾ ಜಡ್ಜ್’

Last Updated 8 ಮಾರ್ಚ್ 2022, 11:46 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಪ್ರತಿ ವರ್ಷ ಯಾವುದೇ ಮೀಸಲಾತಿ ಇಲ್ಲದೇ ಸಾಮಾನ್ಯ ವರ್ಗದಿಂದ ಮಹಿಳೆಯರು ನ್ಯಾಯಾಧೀಶರಾಗಿ ನೇಮಕಗೊಳ್ಳುತ್ತಿರುವುದು ಸಂತಸದ ವಿಷಯವಾಗಿದೆ’ ಎಂದು ಜಿಲ್ಲಾ ನ್ಯಾಯಾಧೀಶ ಶುಭವೀರ್ ಜೈನ್ ಬಿ. ಹೇಳಿದರು.

ನಗರದಲ್ಲಿ ಮಂಗಳವಾರ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘದಿಂದ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ‘ಯಾವುದೇ ಮೀಸಲಾತಿ ಇಲ್ಲದೇ ಸಾಮಾನ್ಯ ವರ್ಗದ ಮಹಿಳೆಯರು ಉನ್ನತ ಸ್ಥಾನ ಗಳಿಸುತ್ತಿರುವುದು ವಿಶೇಷ. ಸ್ವತಂತ್ರವಾಗಿ ತಮ್ಮ ಕಾರ್ಯಸಿದ್ಧಿ ಕೈಗೊಂಡಾಗ ಯಶಸ್ಸು ಸಿಗುತ್ತದೆ‌. ಪ್ರತಿಯೊಬ್ಬರು ತಮ್ಮ ಹಕ್ಕುಗಳು ಜೊತೆಗೆ ಕರ್ತವ್ಯದ ಬಗ್ಗೆ ತಿಳಿದುಕೊಂಡಾಗ ಸಮಾನತೆ ನೆಲೆಸುತ್ತದೆ’ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ತೃಪ್ತಿ ಧರಣಿ ಮಾತನಾಡಿ, ಈ ಹಿಂದಿಗೆ ಹೋಲಿಸಿದರೆ ಸಮಾಜದಲ್ಲಿ ಮಹಿಳೆಯರ ಸುಧಾರಣೆ ಹೆಚ್ಚಾಗಿದೆ. ಭವಿಷ್ಯದಲ್ಲಿ ಮತ್ತಷ್ಟು ಹೆಚ್ಚಾಗಲು ಸಮಾಜದ ಜೊತೆ ಕೈಜೋಡಿಸಬೇಕು’ ಎಂದು ಹೇಳಿದರು.

ಹೆಣ್ಣು ಹೆಂಡತಿ, ತಾಯಿ, ಮಗಳಾಗಿ ಕುಟುಂಬವನ್ನು ಮುನ್ನಡೆಸುತ್ತಾಳೆ. ಮಕ್ಕಳಿಗೆ ನೀತಿ ಬೋಧಿಸುವಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು ಎಂದರು.

ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ವಕೀಲರಿಗೆ ಹಮ್ಮಿಕೊಂಡಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಪದ್ಮ ಪ್ರಸಾದ್, ಸದಸ್ಯ ಕಾರ್ಯದರ್ಶಿ ಕಿಶನ್ ಬಿ.ಮಾಡಲಗಿ, 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಜಿ.ಸಂಜೀವ್ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಬಸವರಾಜ, ಪ್ರಧಾನ ಕಾರ್ಯದರ್ಶಿ ಎ.ಕರುಣಾನಿಧಿ, ಗೀತಾ, ಜೆ.ತ್ರಿವೇಣಿ, ರೇಣುಕಾ, ಸುಧಾ ಜೋಷಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT