ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂ.ಪಿ.ಪ್ರಕಾಶ್ ಪತ್ನಿ ರುದ್ರಾಂಬಾ ನಿಧನ

Published 29 ಏಪ್ರಿಲ್ 2024, 15:37 IST
Last Updated 29 ಏಪ್ರಿಲ್ 2024, 15:37 IST
ಅಕ್ಷರ ಗಾತ್ರ

ಹೂವಿನಹಡಗಲಿ (ವಿಜಯನಗರ ಜಿಲ್ಲೆ): ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ.ಪ್ರಕಾಶ್ ಅವರ ಪತ್ನಿ ಎಂ.ಪಿ.ರುದ್ರಾಂಬಾ ಪ್ರಕಾಶ್ (83) ಸೋಮವಾರ ಇಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾದರು.

ಎಂ.ಪಿ.ಪ್ರಕಾಶ್ ಸಮಾಜಮುಖಿ ಟ್ರಸ್ಟ್‌ನ ಗೌರವಾಧ್ಯಕ್ಷರಾಗಿದ್ದ ಅವರಿಗೆ ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ, ರಂಗಭಾರತಿ ಅಧ್ಯಕ್ಷೆ ಎಂ.ಪಿ.ಸುಮಾ, ಎಂ.ಪಿ.ವೀಣಾ ಸೇರಿ ಮೂವರು ಪುತ್ರಿಯರು ಇದ್ದಾರೆ. ಅವರ ಪುತ್ರ ಹಾಗೂ ಹರಪನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ರವೀಂದ್ರ ಆರು ವರ್ಷದ ಹಿಂದೆ ನಿಧನರಾಗಿದ್ದರು.

ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಇಲ್ಲಿನ ಎಂ.ಪಿ.ಪ್ರಕಾಶ್ ಸಮಾಧಿ ಬಳಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT