ಹೂವಿನಹಡಗಲಿ: ತಾಲ್ಲೂಕಿನ ನಂದಿಹಳ್ಳಿ ಗ್ರಾಮದ ರಸ್ತೆಯೊಂದು ಕೆಸರು ಗದ್ದೆಯಾಗಿ ಮಾರ್ಪಟ್ಟಿದ್ದು, ಓಡಾಟಕ್ಕೆ ತೊಂದರೆಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ನಿರಂತರವಾಗಿ ತುಂತುರು ಮಳೆ ಸುರಿಯುತ್ತಿರುವ ಕಾರಣ ನೀರು ರಸ್ತೆಯ ಮೇಲೆ ನಿಲ್ಲುವುದರಿಂದ ರಸ್ತೆ ಸಂಪೂರ್ಣ ಹಾಳಾಗಿದೆ. ಕೆಲ ದಿನಗಳ ಹಿಂದೆ ಜಲಜೀವನ್ ಮಿಷನ್ ಕಾಮಗಾರಿಗಾಗಿ ನೆಲವನ್ನು ಅಗೆದು ಹಾಗೇ ಬಿಟ್ಟಿರುವುದರಿಂದ ಗ್ರಾಮದ ರಸ್ತೆಗಳೆಲ್ಲ ಕೆಸರು ಗುಂಡಿಗಳಾಗಿವೆ. ಬೈಕ್ ಸವಾರರು ನಿಯಂತ್ರಣ ತಪ್ಪಿ ಬಿದ್ದು ಗಾಯಗೊಳ್ಳುತ್ತಿರುವ ಘಟನೆಗಳು ಹೆಚ್ಚಾಗಿವೆ.
ಕೂಡಲೇ ಸಂಬಂಧಿಸಿದವರು ಗಮನಹರಿಸಿ ರಸ್ತೆ ಅಭಿವೃದ್ಧಿಪಡಿಸಬೇಕು’ ಎಂದು ಗ್ರಾ.ಪಂ. ಮಾಜಿ ಅಧ್ಯಕ್ಷ ವಿ.ಬಿ.ಶಿವಾನಂದ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.