ಹೊಸಪೇಟೆ (ವಿಜಯನಗರ): ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹಾಗೂ ಇತರೆ ಮೂವರ ವಿರುದ್ಧ ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಂಗಳವಾರ ರಾತ್ರಿ ಪ್ರಕರಣ ದಾಖಲಾಗಿದೆ.

ಡಿ. ಪೋಲಪ್ಪ ಎಂಬುವರು ಕೊಟ್ಟ ದೂರಿನ ಮೇರೆಗೆ ಐ.ಪಿ.ಸಿ. ಸೆಕ್ಷೆನ್ 504, 506ರ ಅಡಿ ಎಸ್ಸಿ/ಎಸ್ಟಿ ಕಾಯ್ದೆ ಅನ್ವಯ ಆನಂದ್ ಸಿಂಗ್, ಮರಿಯಪ್ಪ, ಹನುಮಂತಪ್ಪ ಹಾಗೂ ಹುಲುಗಪ್ಪ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

‘ಪೆಟ್ರೋಲ್ ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಸಚಿವ ಆನಂದ್ ಸಿಂಗ್ ಅವರು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಪೋಲಪ್ಪ ಅವರು ಅವರ ಕುಟುಂಬದ ಒಂಬತ್ತು ಜನ ಸದಸ್ಯರೊಂದಿಗೆ ಮಂಗಳವಾರ ಸಂಜೆ ನಗರದ ಎಸ್ಪಿ ಕಚೇರಿ ಎದುರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಅವರನ್ನು ತಡೆದು, ಆಸ್ಪತ್ರೆಗೆ ಕಳಿಸಿದ್ದರು.

ಓದಿ... ಆನಂದ್ ಸಿಂಗ್ರಿಂದ ಕೊಲೆ ಬೆದರಿಕೆ?: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.