ಹೊಸಪೇಟೆ: ಇದೇ 14ರಂದು ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕೋತ್ಸವ ಜರಗಲಿದೆ. ಪ್ರಯಾಣಿಕರು ಹಾಗೂ ಭಕ್ತಾಧಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವತಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.

ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ ಭಾಗಗಳಿಂದ ಫೆ.12 ರಿಂದ 15ರವರೆಗೆ ವಿಶೇಷ ಬಸ್ಗಳು ಸಂಚರಿಸಲಿವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಮ್ಮಾರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ ವಿದ್ಯುತ್ ವ್ಯತ್ಯಯ

ಹೊಸಪೇಟೆ: ಕಮಲಾಪುರದ 110/11 ಕೆವಿ ಗ್ರಾಮೀಣ ಉಪವಿಭಾಗ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಫೆ.13ರಂದು ಕಮಲಾಪುರದ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ–ಅರ್ಜಿ

ಹೊಸಪೇಟೆ: ಕರ್ನಾಟಕ ವಿಧಾನಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತಿ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನಸಭಾ ಸಚಿವಾಲಯದ ವತಿಯಿಂದ ಫೆ.27ರಿಂದ ಮಾರ್ಚ್ 3ರವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ ಹಮ್ಮಿಕೊಳ್ಳಲಾಗಿದೆ.

ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ನಾಡಿನ ಪ್ರಕಾಶಕರು/ ಮಾರಾಟಗರಾರು ನಿಗದಿತ ಅರ್ಜಿ ನಮೂನೆಯನ್ನು ವಿಧಾನಸಭೆ ಸಚಿವಾಲಯದ ವೆಬ್ಸೈಟ್ www.kla.kar.nic.in ನಲ್ಲಿ ಪಡೆದುಕೊಳ್ಳಬಹುದು ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.