ಗುರುವಾರ , ಜುಲೈ 7, 2022
25 °C

ಹೊಸಪೇಟೆ: ಮೈಲಾರ ಜಾತ್ರಾ ಮಹೋತ್ಸವ, ದೇವರ ದರ್ಶನಕ್ಕೆ ಭಕ್ತರಿಗೆ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ಜಿಲ್ಲೆಯ ಹೂವಿನಹಡಗಲಿಯ ಮೈಲಾರದ ಮೈಲಾರಲಿಂಗೇಶ್ವರ ಸ್ವಾಮಿ, ಕುರುವತ್ತಿ ಮಲ್ಲಿಕಾರ್ಜುನ ಸ್ವಾಮಿ, ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಚ್ಚಿನ ಜನಸಂದಣಿ ಸೇರುವ ಸಾಧ್ಯತೆ ಇರುವುದರಿಂದ ದೇವರ ದರ್ಶನಕ್ಕೆ ಭಕ್ತರಿಗೆ ನಿಷೇಧ ಹೇರಿ ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ. ಗುರುವಾರ ಆದೇಶ ಹೊರಡಿಸಿದ್ದಾರೆ.

ಫೆ. 8ರಿಂದ 19ರ ವರೆಗೆ ಮೈಲಾರ ಜಾತ್ರೆ, ಫೆ. 25ರಿಂದ ಮಾ. 3ರ ವರೆಗೆ ಮಲ್ಲಿಕಾರ್ಜುನ ಸ್ವಾಮಿ, ಬಸವೇಶ್ವರ ಸ್ವಾಮಿ ಜಾತ್ರೆಗೆ ಲಕ್ಷಾಂತರ ಭಕ್ತರು ಬರುವ ಸಾಧ್ಯತೆ ಇದೆ. ಕೊರೊನಾ ವೈರಸ್‌ ವ್ಯಾಪಕವಾಗಿ ಹರಡುತ್ತಿರುವುದರಿಂದ ಅದನ್ನು ತಡೆಯಲು ಭಕ್ತರಿಗೆ ದೇವರ ದರ್ಶನಕ್ಕೆ ನಿಷೇಧ ಹೇರಲಾಗಿದೆ. ಜಾತ್ರೆ ನಡೆಯಲಿರುವ ಪ್ರದೇಶದಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು