ಮಂಗಳವಾರ, ಜುಲೈ 5, 2022
21 °C

ಹರಪನಹಳ್ಳಿ: ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹರಪನಹಳ್ಳಿ: ತಾಲ್ಲೂಕಿನ ಚಿಗಟೇರಿ ಗ್ರಾಮದಲ್ಲಿ ಗುರುವಾರ ಸಂಜೆ ನಡೆದ ನಾರದಮುನಿ ರಥೋತ್ಸವದ ವೇಳೆ ತೇರಿನ ಚಕ್ರಕ್ಕೆ ಸಿಲುಕಿ ಭಕ್ತರೊಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ದಾವಣಗೆರೆಯ ಸುರೇಶ್‌ ಬಸವನಗೌಡ (45) ಎಂದು ಗುರುತಿಸಲಾಗಿದೆ. ತೇರು ಚಲಿಸುವಾಗ ನೂಕು ನುಗ್ಗಲಿನಲ್ಲಿ ಸುರೇಶ್‌ ಚಕ್ರದ ಅಡಿಗೆ ಸಿಲುಕಿದ್ದಾರೆ. ಅವರ ಮೇಲೆ ಗಾಲಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತೇರು ದೇವಸ್ಥಾನದಿಂದ ಸ್ವಲ್ಪ ದೂರ ಕ್ರಮಿಸಿದಾಗ ಈ ಘಟನೆ ನಡೆದಿದೆ. ಘಟನೆಯಿಂದ ಭಕ್ತರು ತೀವ್ರ ಆತಂಕಕ್ಕೆ ಒಳಗಾಗಿದ್ದರು. ಪೊಲೀಸರು ಜನರನ್ನು ನಿಯಂತ್ರಿಸಿ, ಶವ ತೆಗೆದು ಆಸ್ಪತ್ರೆಗೆ ಸಾಗಿಸಿದರು. ಬಳಿಕ ತೇರಿನ ಗಾಲಿಯನ್ನು ನೀರಿನಿಂದ ತೊಳೆದು ದೇವಸ್ಥಾನದ ವರೆಗೆ ಎಳೆಯಲಾಯಿತು. ಸಂಜೆಯ ಘಟನೆಯಿಂದ ದಿನವಿಡೀ ಇದ್ದ ಸಂಭ್ರಮ ಮರೆಯಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು