ಹೊಸಪೇಟೆ (ವಿಜಯನಗರ): ನಗರದ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿರುವ 405 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ತ್ರಿವರ್ಣ ಧ್ವಜ ಹರಿದ ಸ್ಥಿತಿಯಲ್ಲಿ ಹಾರಾಡುತ್ತಿದೆ.

ಗುರುವಾರದಿಂದ ಧ್ವಜ ಹರಿದ ಸ್ಥಿತಿಯಲ್ಲೇ ಹಾರಾಡುತ್ತಿದೆ. ಆದರೆ, ಅಧಿಕಾರಿಗಳು ಅದನ್ನು ಕೆಳಗಿಳಿಸಿಲ್ಲ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುತ್ತಿರುವುದು ಸರಿಯಲ್ಲ. ಕೂಡಲೇ ಕೆಳಗಿಳಿಸಿ ಬೇರೆ ಧ್ವಜ ಹಾರಿಸಬೇಕೆಂದು ವಿಜಯನಗರ ಜಿಲ್ಲಾ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಸಂಘಧ ಅಧ್ಯಕ್ಷ ಸೋಮಶೇಖರ್ ಬಣ್ಣದಮನೆ ಆಗ್ರಹಿಸಿದ್ದಾರೆ.

ಸಾರ್ವಜನಿಕರ ತೆರಿಗೆ ಹಣದಲ್ಲಿ ಎತ್ತರದ ಧ್ವಜಸ್ತಂಭ ನಿರ್ಮಿಸಿ ಅದನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದಿದ್ದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.

'ಪರಿಶೀಲಿಸಿ ಸರಿಪಡಿಸುವ ಕೆಲಸ ಮಾಡಲಾಗುವುದು' ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ 'ಪ್ರಜಾವಾಣಿ'ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.