ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಸಾಮರಸ್ಯ ಕದಡುವವರ ವಿರುದ್ಧ ಕ್ರಮಕ್ಕೆ ಆಗ್ರಹ

Last Updated 4 ಏಪ್ರಿಲ್ 2022, 12:26 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಿ ಸಾಮರಸ್ಯ ಕದಡಲು ಯತ್ನಿಸುತ್ತಿರುವ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಿಪಿಐ(ಎಂ) ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಸಂಘ ಪರಿವಾರ ಹಾಗೂ ಇತರೆ ಸಂಘಟನೆಗಳ ಕಾರ್ಯಕರ್ತರು ವಿನಾಕಾರಣ ದಾಂದಲೆ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಗುರಿಯಾಗಿರಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವುಗಳ ವಿರುದ್ಧ ಕ್ರಮ ಕೈಗೊಂಡು ಶಾಂತಿ ಸುವ್ಯವಸ್ಥೆ ಕಾಪಾಡಬೇಕೆಂದು ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಯವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದರು.

ಪಕ್ಷದ ಮುಖಂಡ ಎ.ಕರುಣಾನಿಧಿ ಮಾತನಾಡಿ, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ನಿರ್ಬಂಧಿಸುವಂತೆ ಸಂಘ ಪರಿವಾರದ ಸಂಘಟನೆಗಳಾದ ಬಜರಂಗದಳ, ಶ್ರೀರಾಮ ಸೇನೆ ಸೇರಿದಂತೆ ಇತರೆ ಸಂಘಟನೆಗಳು ಆಗ್ರಹಿಸುತ್ತಿರುವುದು ಸರಿಯಲ್ಲ. ಇದು ಪ್ರಚೋದನೆಗೆ ಅವಕಾಶ ಮಾಡಿಕೊಡುತ್ತದೆ. ಇಂತಹ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮುಖಂಡರಾದ ಈಡಿಗರ ಮಂಜುನಾಥ, ಎನ್.ಯಲ್ಲಾಲಿಂಗ, ಬಿ.ಮಹೇಶ, ಬಿ.ರಮೇಶ್ ಕುಮಾರ್, ವಿ.ಸ್ವಾಮಿ, ಯಲ್ಲಮ್ಮ, ಮೊಹಮ್ಮದ್ ಖದೀರ್, ಅಲ್ತಾಫ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT