ಶುಕ್ರವಾರ, ಆಗಸ್ಟ್ 12, 2022
20 °C

ಶನಿವಾರದೊಳಗೆ ನಗರಸಭೆಗೆ ಹೊಸ ಪೌರಾಯುಕ್ತರು: ಸಚಿವ ಆನಂದ್‌ ಸಿಂಗ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ‘ನಗರಸಭೆಯ ಹಾಲಿ ಪೌರಾಯುಕ್ತ ಬಿ.ಎಸ್‌. ರಮೇಶ್‌ ಅವರು ಆರೋಗ್ಯ ಸರಿಯಿಲ್ಲವೆಂದು ದೀರ್ಘ ರಜೆ ಪಡೆದಿದ್ದಾರೆ. ಪೌರಾಯುಕ್ತರಿಂದಲೇ ಕೆಲಸ ಆಗಬೇಕು ಎಂದೇನಿಲ್ಲ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಿದ್ದು, ಶನಿವಾರದೊಳಗೆ ಹೊಸ ಪೌರಾಯುಕ್ತರು ಬರುತ್ತಾರೆ’ ಎಂದು ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಭೂಗಳ್ಳರ ಬಗ್ಗೆ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಕೆಲ ಅಧಿಕಾರಿಗಳ ಅಮಾನತಿಗೆ ಜಿಲ್ಲಾಡಳಿತ ಶಿಫಾರಸು ಮಾಡಿರುವುದು ಮಾಧ್ಯಮಗಳಿಂದ ಗೊತ್ತಾಗಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇರೆಯವರ ಆಸ್ತಿಯನ್ನು ಕಬಳಿಸುವವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುವುದು’ ಎಂದರು.

‘ಭೂಗಳ್ಳತನಕ್ಕೆ ನೆರವಾದವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಯವರು ಈಗಾಗಲೇ ಎಸ್ಪಿಯವರಿಗೆ ತಿಳಿಸಿದ್ದಾರೆ. ಈ ಬಗ್ಗೆ ನಗರಸಭೆಯ ಎಲ್ಲ ಸದಸ್ಯರೊಂದಿಗೆ ಚರ್ಚೆ ನಡೆಸಿದ್ದು, ಮುಂದೆ ನಗರಸಭೆಯಲ್ಲಿ ತಪ್ಪುಗಳು ಆಗದಂತೆ ನೋಡಿಕೊಳ್ಳಲಾಗುವುದು’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು