ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಕ್ಸಿಜನ್‌, ಬೆಡ್‌ಗಿಲ್ಲ ಕೊರತೆ’

Last Updated 19 ಏಪ್ರಿಲ್ 2021, 14:07 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಕೋವಿಡ್‌–19 ನಿಭಾಯಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಷ್ಟೇ ಪ್ರಕರಣ ಬಂದರೂ ಆಕ್ಸಿಜನ್‌, ಬೆಡ್‌ಗೆ ಕೊರತೆ ಆಗದಂತೆ ವ್ಯವಸ್ಥೆ ಮಾಡಲಾಗಿದೆ’ ಎಂದು ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ ತಿಳಿಸಿದರು.

ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಗರದ ಸರ್ಕಾರಿ ಆಸ್ಪತ್ರೆ, ಹೆರಿಗೆ ಆಸ್ಪತ್ರೆ ಹಾಗೂ ಜಂಬುನಾಥ ಗುಡ್ಡ ಸಮೀಪದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಸ್ಟೆಲ್, ಕಮಲಾಪುರ ಸಮೀಪದ ಎರಡು ಹಾಸ್ಟೆಲ್‌ಗಳಲ್ಲಿ ನೂರಕ್ಕೂ ಅಧಿಕ ಬೆಡ್‌ಗಳಿಗೆ ವ್ಯವಸ್ಥೆ ಮಾಡಲಾಗಿದೆ. ತಾಲ್ಲೂಕಿನ ವೆಂಕಟಾಪುರದಲ್ಲಿ ಒಂದೇ ಕುಟುಂಬದ 11 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಎಲ್ಲರನ್ನೂ ಜಂಬುನಾಥ ಗುಡ್ಡ ಸಮೀಪದ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತಾಲ್ಲೂಕಿನಲ್ಲಿ 434 ಸಕ್ರಿಯ ಪ್ರಕರಣಗಳಿವೆ’ ಎಂದು ವಿವರಿಸಿದರು.

‘44 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಿಕ್ಕುಳಿದವರು ಹೋಂ ಐಸೋಲೇಷನ್‌ನಲ್ಲಿ ಇದ್ದಾರೆ. ವಾರದ ಸಂತೆ ಬಂದ್‌ ಮಾಡುವುದರ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಹೋಂ ಐಸೋಲೇಷನ್‌ನಲ್ಲಿ ಇರುವವರು ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT