ಗುರುವಾರ , ಸೆಪ್ಟೆಂಬರ್ 23, 2021
21 °C

ಹಂಪಿಗೆ ಪ್ರವಾಸಿಗರ ಭೇಟಿ: ವಾರಾಂತ್ಯದ ನಿರ್ಬಂಧ ಹಿಂಪಡೆದ ಜಿಲ್ಲಾಡಳಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ವಾರಾಂತ್ಯಕ್ಕೆ ಇಲ್ಲಿನ ಹಂಪಿ ಸ್ಮಾರಕಗಳ ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧವನ್ನು ಜಿಲ್ಲಾಡಳಿತ ಗುರುವಾರ ಹಿಂಪಡೆದಿದೆ.

ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಹಂಪಿ, ಕಮಲಾಪುರ, ವೆಂಕಟಾಪುರ ಸುತ್ತಮುತ್ತಲಿನ ಸ್ಮಾರಕಗಳು, ದೇವಸ್ಥಾನಗಳಿಗೆ ಸಾರ್ವಜನಿಕರು, ಭಕ್ತರು ಭೇಟಿ ಕೊಡಬಹುದು ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ತಿಳಿಸಿದ್ದಾರೆ.

ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ 2ಕ್ಕಿಂತ ಕಡಿಮೆ ಇರುವುದರಿಂದ ಜಿಲ್ಲಾಡಳಿತ ಈ ತೀರ್ಮಾನಕ್ಕೆ ಬಂದಿದೆ.

‘ಪ್ರವಾಸೋದ್ಯಮವನ್ನೇ ನಂಬಿ ಬದುಕುತ್ತಿರುವವರ ಬದುಕು ಮೂರಾಬಟ್ಟೆ, ಹಂಪಿಯಲ್ಲಿ ವಾರಾಂತ್ಯ ನಿರ್ಬಂಧ ತೆರವು’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ ಗುರುವಾರ ವರದಿ ಪ್ರಕಟಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು