ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನಹೊಸಹಳ್ಳಿ: ಅಪರಿಚಿತ ವಾಹನ ಡಿಕ್ಕಿ, ವ್ಯಕ್ತಿ ಸಾವು ಹೆದ್ದಾರಿ ಬಂದ್

Last Updated 4 ಮಾರ್ಚ್ 2021, 4:50 IST
ಅಕ್ಷರ ಗಾತ್ರ

ಕಾನಹೊಸಹಳ್ಳಿ: ಸಮೀಪದ ಎಂ.ಬಿ.ಅಯ್ಯನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ಬೆಳಿಗ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಎಂ.ಬಿ. ಅಯ್ಯನಹಳ್ಳಿ ಗ್ರಾಮದ ಮುಸ್ಟಲಗುಮ್ಮಿ ಪಾಪಣ್ಣ(65)ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬೆಳಿಗ್ಗೆ ಹೆದ್ದಾರಿಯನ್ನು ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಪಾಪಣ್ಣ ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಇದರಿಂದ ಕೋಪಗೊಂಡ ಸ್ಥಳೀಯರು ಮೃತ ದೇಹವನ್ನು ತೆರವುಗೊಳಿಸಲು ಅನುವು ಮಾಡಿಕೊಡದೆ ನಡು ರಸ್ತೆಯಲ್ಲಿಯೇ ಬಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಹೆದ್ದಾರಿಯ ಎರಡು ಕಡೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ.

ಗ್ರಾಮದ ಮಧ್ಯದಲ್ಲಿಯೇ ಹೆದ್ದಾರಿ ಹಾದು ಹೋಗಿದ್ದು, ಗ್ರಾಮದ ಒಂದು ಕಡೆಯಿಂದ ಪ್ರೌಢ ಶಾಲೆಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಹೊಲಕ್ಕೆ ಹೊಗುವ ರೈತರು ಹೆದ್ದಾರಿಯನ್ನು ದಾಟಿಕೊಂಡು ಹೋಗಬೇಕು. ಇದರಿಂದ ಇಲ್ಲಿ ಪದೇ ಪದೇ ಅಪಘಾತಗಳು ನಡೆಯುತ್ತಿವೆ. ಇದನ್ನು ತಪ್ಪಿಸಲು ರಸ್ತೆಗೆ ಕೆಳ ಸೇತುವೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ಕೆಲ ದಿನಗಳ ಹಿಂದೆಯಷ್ಟೆ ಗ್ರಾಮದವರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು.

ಇದೀಗ ಮತ್ತೆ ಅಪಘಾತದಲ್ಲಿ ವ್ಯಕ್ತಿ ಮೃತಪಟ್ಟಿರುವುದು ಗ್ರಾಮಸ್ಥರನ್ನು ಕೆರಳಿಸಿದ್ದು, ರಸ್ತೆಯಲ್ಲಿ ಮೃತ ದೇಹವನ್ನಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವ ಗ್ರಾಮಸ್ಥರು ಕೆಳ ಸೇತುವ ನಿರ್ಮಾಣ ಮಾಡುವವರೆಗೂ ರಸ್ತೆ ತಡೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಸ್ಥಳಕ್ಕೆ ತಹಶೀಲ್ದರ್ ಎಸ್. ಮಹಬಲೇಶ್ವರ, ಕೊಟ್ಟೂರು ಸಿಪಿಐ ದೊಡ್ಡಣ್ಣ, ಕಾನಹೊಸಹಳ್ಳಿ ಪಿಎಸ್‍ಐ ಎಚ್. ನಾಗರಾಜ ಸ್ಥಳಕ್ಕೆ ಬಂದು ಮೃತ ದೇಹವನ್ನು ತೆರವುಗೊಳಿಸುವಂತೆ ಮೃತರ ಕುಟುಂಬಸ್ಥರ ಮನವೊಲಿಕೆಯಲ್ಲಿ ತೊಡಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT