ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ ಅವರು ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿದ್ದು, ಲೋಕಸಭೆ, ವಿಧಾನಸಭೆ ಚುನಾವಣೆ ಜತೆಗೆ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಮಾಡುವುದು ಸರಿಯಲ್ಲ, ಇದರಿಂದ ದೇಶದ ಒಕ್ಕೂಟ ವ್ಯವಸ್ಥೆಯನ್ನು ಸಂಪೂರ್ಣ ನಾಶ ಮಾಡಿದಂತಾಗುತ್ತದೆ. ಪ್ರಸ್ತುತ ದೇಶದ ಹಣಕಾಸಿನ ಪರಿಸ್ಥಿತಿಯೂ ಇದಕ್ಕೆ ತಕ್ಕಂತೆ ಇಲ್ಲ ಎಂದು ಹೇಳಿದ್ದಾರೆ.