ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ ಜಿಲ್ಲೆಯಲ್ಲಿ ತೀವ್ರಗೊಂಡ ಮಳೆ: ಈರುಳ್ಳಿ, ಭತ್ತದ ಬೆಳೆ ಹಾನಿ

ಮಳೆಗೆ 65 ಮನೆಗಳು ಕುಸಿತ
Last Updated 19 ನವೆಂಬರ್ 2021, 12:43 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಸತತವಾಗಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ 65 ಮನೆಗಳಿಗೆ ಹಾನಿಯಾಗಿದೆ.
ಜಿಲ್ಲೆಯ ಹೂವಿನಹಡಗಲಿಯಲ್ಲಿ 24, ಕೂಡ್ಲಿಗಿಯಲ್ಲಿ 17, ಕೊಟ್ಟೂರು–16, ಹಗರಿಬೊಮ್ಮನಹಳ್ಳಿ–5, ಹೊಸಪೇಟೆ ತಾಲ್ಲೂಕಿನಲ್ಲಿ 3 ಮನೆಗಳು ಭಾಗಶಃ ಕುಸಿದಿವೆ. ಯಾವುದೇ ಪ್ರಾಣ ಹಾನಿಯಾಗಿಲ್ಲ.

ಹೊಸಪೇಟೆ ತಾಲ್ಲೂಕಿನ ರಾಜಪುರ, ಗುಂಡ್ಲುವದ್ದಿಗೇರಿಯಲ್ಲಿ ಅಪಾರ ಪ್ರಮಾಣದ ಈರುಳ್ಳಿ, ಮೆಣಸಿನಕಾಯಿ ಬೆಳೆ ಹಾಳಾಗಿದೆ. ಹೂವಿನಹಡಗಲಿಯಲ್ಲಿ 200 ಎಕರೆಗೂ ಹೆಚ್ಚು ಪ್ರದೇಶದಲ್ಲಿನ ಭತ್ತ ನೆಲಕಚ್ಚಿದೆ. ಇನ್ನಷ್ಟೇ ಸಮೀಕ್ಷೆ ನಡೆಯಬೇಕಿದ್ದು, ಬಳಿಕ ಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನದಿಗೆ ನೀರು: ಇಲ್ಲಿನ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿರುವುದರಿಂದ ಹೆಚ್ಚುವರಿ ನೀರು ನದಿಗೆ ಹರಿಸಲಾಗುತ್ತಿದೆ. 50,000 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರು ನದಿಗೆ ಹರಿಸಲಾಗುತ್ತಿದೆ. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯ ಪೂರ್ಣ ತುಂಬಿದೆ. 12 ಕ್ರಸ್ಟ್‌ಗೇಟ್‌ಗಳಿಂದ ನೀರು ಹರಿಸಲಾಗುತ್ತಿದೆ. ನದಿ ಪಾತ್ರ ಜನ ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ.

ಹೊಸಪೇಟೆ ತಾಲ್ಲೂಕಿನ ರಾಜಪುರದಲ್ಲಿ ಅಪಾರ ಪ್ರಮಾಣದ ಈರುಳ್ಳಿ ಬೆಳೆ ಹಾನಿಯಾಗಿದೆ.
ಹೊಸಪೇಟೆ ತಾಲ್ಲೂಕಿನ ರಾಜಪುರದಲ್ಲಿ ಅಪಾರ ಪ್ರಮಾಣದ ಈರುಳ್ಳಿ ಬೆಳೆ ಹಾನಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT