ಹೊಸಪೇಟೆ (ವಿಜಯನಗರ): ಕೇಂದ್ರ ಸರ್ಕಾರ ಹಿಂದಿ ಭಾಷೆ ಹೇರುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ರಾಷ್ಟ್ರೀಕೃತ ಬ್ಯಾಂಕುಗಳ ಎದುರು ಸೇರಿ ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಹಿಂದಿ ವೈಭವೀಕರಣ ಸಲ್ಲದು ಎಂದು ಸಿಟ್ಟು ಹೊರಹಾಕಿದರು.
ವೇದಿಕೆಯ ಜಿಲ್ಲಾ ಅಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ ಮಾತನಾಡಿ, ‘ಹಿಂದಿ ರಾಷ್ಟ್ರೀಯ ಭಾಷೆಯಲ್ಲ. ಆದರೆ, ಕೇಂದ್ರ ಸರ್ಕಾರ ಜನರ ದಿಕ್ಕು ತಪ್ಪಿಸುತ್ತಿದೆ. ಭಾರತದಲ್ಲಿ ಯಾವ ಭಾಷೆಯೂ ಮೇಲು, ಕೀಳಲ್ಲ. ಎಲ್ಲಾ ಭಾಷೆಗಳಿಗೆ ಸಮಾನ ಆದ್ಯತೆ ಸಿಗಬೇಕು’ ಎಂದರು.
ಉಪಾಧ್ಯಕ್ಷ ಆರ್ಮುಗಮ್, ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ಅಧ್ಯಕ್ಷ ಎಸ್.ಎಂ.ಜಾಫರ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಪದಾಧಿಕಾರಿಗಳಾದ ಗುಜ್ಜಲ್ ಹುಲುಗಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀದೇವಿ, ಸುವರ್ಣರತ್ನ, ವಿರೂಪಾಕ್ಷಿ, ಲತಾ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.