ಹೊಸಪೇಟೆ (ವಿಜಯನಗರ): ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ₹35 ಸಾವಿರ ಹಾಗೂ ಸೇವಾ ಭದ್ರತೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರಿಗೆ ಮನವಿ ಸಲ್ಲಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪದಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಹಾಸ್ಟೆಲ್ ಮತ್ತು ವಸತಿ ನಿಲಯಗಳಲ್ಲಿ ಹೊರಗುತ್ತಿಗೆ ನೌಕರರು, ಸಿಬ್ಬಂದಿ ಕಳೆದ 15-20 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ರಾಜ್ಯ ಮತ್ತು ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಸಾಕಷ್ಟು ಹೋರಾಟ ಮಾಡಿದ ಪ್ರತಿಫಲವಾಗಿ ರಾಜ್ಯ ಸರ್ಕಾರ ಏ.11ರಂದು ಕಾರ್ಮಿಕ ಇಲಾಖೆಯು 4ವಲಯಗಳ ಬದಲಾಗಿ, 3 ವಲಯಗಳನ್ನು ಮಾಡಿದೆ.

ಕನಿಷ್ಟ ವೇತನ ₹31 ಸಾವಿರ ಕೇಳಿದ್ದಕ್ಕೆ ₹25,714 ನಿಗದಿ ಮಾಡಿ, ಗೆಜೆಟ್ ನೋಟಿಪಿಕೇಷನ್ಗೆ ಕಾರ್ಮಿಕ ಇಲಾಖೆ ಮೂಲಕ ರಾಜ್ಯ ಸರ್ಕಾರಕ್ಕೆ ಕಳಿಸಿದ್ದು, ಸಂಘ ಸ್ವಾಗತಿಸುತ್ತದೆ. ಸಂಘದ ಹೋರಾಟಕ್ಕೆ ಜಯ ಸಿಕ್ಕಿದೆ ಎಂದರು.

ಅಲ್ಲದೆ ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಕನಿಷ್ಟ ವೇತನ ₹35 ಸಾವಿರ, ಸೇವಾ ಭದ್ರತೆ, ಕಾಯಂಗಾಗಿ ಕಳೆದ 15 ವರ್ಷಗಳಿಂದ ಹೋರಾಟ ಮಾಡುತ್ತಿದ್ದು, ಇದರ ಬಗ್ಗೆ ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳು ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.