ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಪರಮಶಿವಮೂರ್ತಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕುಲಪತಿ

Last Updated 23 ಮಾರ್ಚ್ 2023, 16:20 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಡಿ.ವಿ. ಪರಮಶಿವಮೂರ್ತಿ ಅವರು ನೇಮಕಗೊಂಡಿದ್ದಾರೆ.

ತುಮಕೂರು ವಿಶ್ವವಿದ್ಯಾಲಯದ ಡಾ.ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಪರಮಶಿವಮೂರ್ತಿ ಅವರನ್ನು ಮೂರು ವರ್ಷಗಳ ಅವಧಿಗೆ ಕುಲಪತಿಯಾಗಿ ನೇಮಿಸಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ.

ಹಿಂದಿನ ಕುಲಪತಿ ಪ್ರೊ.ಸ.ಚಿ. ರಮೇಶ ಅವರ ಅವಧಿ ಫೆಬ್ರುವರಿ 20ರಂದು ಕೊನೆಗೊಂಡಿತ್ತು. ಹೊಸ ಕುಲಪತಿ ಆಯ್ಕೆ ಪ್ರಕ್ರಿಯೆಗೆ ರಚಿಸಲಾಗಿದ್ದ ಶೋಧನಾ ಸಮಿತಿ ಸಕಾಲಕ್ಕೆ ಸಭೆ ಸೇರಲು ಸಾಧ್ಯವಾಗಿರಲಿಲ್ಲ. ಬಳಿಕ ರಾಜ್ಯಪಾಲರು ತಮ್ಮ ವಿವೇಚನಾಧಿಕಾರ ಬಳಸಿ ಫೆಬ್ರುವರಿ 21ರಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಟಿ.ಪಿ. ವಿಜಯ್‌ ಅವರನ್ನು ಪ್ರಭಾರ ಕುಲಪತಿಯಾಗಿ ನೇಮಿಸಿದ್ದರು.

ಇತ್ತೀಚೆಗೆ ಸಭೆ ಸೇರಿದ್ದ ಶೋಧನಾ ಸಮಿತಿಯು ಅರ್ಜಿಗಳನ್ನು ಪರಿಶೀಲಿಸಿ ಅದರಲ್ಲಿ ಪ್ರಾಧ್ಯಾಪಕರಾದ ಪರಮಶಿವಮೂರ್ತಿ, ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಶಿವಗಂಗಾ ರುಮ್ಮಾ ಹಾಗೂ ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಂ.ಎಸ್‌. ಶೇಖರ್‌ ಅವರ ಹೆಸರುಗಳನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ರಾಜ್ಯಪಾಲರು ಪರಮಶಿವಮೂರ್ತಿ ಅವರ ಹೆಸರಿಗೆ ಅಂಕಿತ ಹಾಕಿದ್ದಾರೆ. ಕುಲಪತಿ ಹುದ್ದೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದ 11 ಮಂದಿ ಸೇರಿದಂತೆ ಒಟ್ಟು 21 ಜನ ಅರ್ಜಿ ಸಲ್ಲಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT