ಗುರುವಾರ , ಅಕ್ಟೋಬರ್ 6, 2022
23 °C

ಗಣೇಶನ ಮೂರ್ತಿ ವಿಸರ್ಜನೆ ವೇಳೆ ಡಿ.ಜೆ ಸೀಜ್: ದಿಢೀರ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಗಣೇಶನ ಮೂರ್ತಿ ವಿಸರ್ಜನೆ ವೇಳೆ ತಡರಾತ್ರಿ ನಿಯಮ ಮೀರಿ ಬಳಸಿದ ಡಿ.ಜೆ.ಯನ್ನು ಪೊಲೀಸರು ಸೀಜ್ ಮಾಡಿದ್ದನ್ನು ವಿರೋಧಿಸಿ ಕೆಲಕಾಲ ನಗರದ ಚಿತ್ರಕೇರಿ ಗಣೇಶ ಮಂಡಳಿಯವರು ಪುಣ್ಯಮೂರ್ತಿ ವೃತ್ತದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ್ದರಿಂದ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

ಡಿ.ಜೆ ಬಂದ್ ಮಾಡಿ ವಶಪಡಿಸಿಕೊಂಡಿದ್ದನ್ನು ವಿರೋಧಿಸಿ ಗಣಪನ ಮೂರ್ತಿ ಸಮೇತ ಪಟ್ಟಣ ಠಾಣೆಗೆ ಹೋಗಲು ಮುಂದಾದರು. 
ಅವರನ್ನು ಪೊಲೀಸರು ಪುಣ್ಯಮೂರ್ತಿ ವೃತ್ತದಲ್ಲಿ ತಡೆದರು.

ಅಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ, ಡಿ.ಜೆ ಬಿಡಬೇಕೆಂದು ಆಗ್ರಹಿಸಿದರು.  ಬಳಿಕ ಪೊಲೀಸರ ಮನವೊಲಿಕೆ ನಂತರ ಗಣೇಶನ ಮೂರ್ತಿಯನ್ನು ವಿಸರ್ಜನೆಗೆ ಕೊಂಡೊಯ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು