ಹೊಸಪೇಟೆ: ಹಂಪಿ ವಿಶ್ವ ಪರಂಪರೆ ಪ್ರದೇಶದ ವ್ಯಾಪ್ತಿಯಲ್ಲಿ ಅನುಮತಿಯಿಲ್ಲದೇ ನಿರ್ಮಾಣ ಹಾಗೂ ಅಭಿವೃದ್ಧಿ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ (ಹವಾಮ) ಆಯುಕ್ತರು ತಿಳಿಸಿದ್ದಾರೆ.

ಹಂಪಿಯು ಯುನೆಸ್ಕೋ ಮಾನ್ಯತೆ ಪಡೆದ ವಿಶ್ವ ಪಾರಂಪರಿಕ ತಾಣವಾಗಿದ್ದು, ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಸಂರಕ್ಷಿಸಲು ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರವು ನಿಗದಿತ ನಿಯಮಾವಳಿಗಳನ್ನು ಜಾರಿಗೆ ತಂದಿದೆ. ಅದರಂತೆ ಪ್ರಾಧಿಕಾರದ ಮಿತಿಯೊಳಗಿನ ಯಾವುದೇ ಕಟ್ಟಡ ನಿರ್ಮಾಣ, ಪುನರ್ ನಿರ್ಮಾಣ, ವಿಸ್ತರಣೆ ಅಥವಾ ಯಾವುದೇ ಅಭಿವೃದ್ದಿ ಚಟುವಟಿಕೆ ಪ್ರಾರಂಭಿಸುವ ಮುನ್ನ ಪ್ರಾಧಿಕಾರದ ಲಿಖಿತ ಅನುಮತಿಯನ್ನು ಪಡೆಯುವುದು ಕಡ್ಡಾಯವಾಗಿದೆ. ಅನುಮತಿಯಿಲ್ಲದೇ ನಡೆಯುವ ಯಾವುದೇ ನಿರ್ಮಾಣ ಕಾರ್ಯಗಳನ್ನು ಅನಧಿಕೃತ ಎಂದು ಪರಿಗಣಿಸಿ ಯಾವುದೇ ಮುನ್ಸೂಚನೆಯಿಲ್ಲದೆ ತೆರವುಗೊಳಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಅನಧಿಕೃತ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ದ ಹವಾಮ ಕಾಯ್ದೆ 2002 ಹಾಗೂ ಇತರೆ ಸಂಬಂಧಿಸಿದ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಗ್ರ ಶಿಕ್ಷಣ ಯೋಜನೆಯಡಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಅಹ್ವಾನ

ಹೊಸಪೇಟೆ: 2025-26ನೇ ಶೈಕ್ಷಣಿಕ ಸಾಲಿಗೆ ತಾಲ್ಲೂಕುಗಳಲ್ಲಿ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗ ತಲಾ 2 ರಂತೆ ವಿಶೇಷ ಸಂಪನ್ಮೂಲ ಶಿಕ್ಷಕರ (ಬಿಐಆರ್ಟಿ) ಒಟ್ಟು 20 ಹುದ್ದೆಗಳಿಗೆ ಅರ್ಹ ಶಿಕ್ಷಕರನ್ನು ನೇಮಿಸಿಕೊಳ್ಳಲು ನೇರಗುತ್ತಿಗೆಯಡಿ ತಾತ್ಕಾಲಿಕವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿಡಿಪಿಐ ವೆಂಕಟೇಶ ರಾಮಚಂದ್ರಪ್ಪ ತಿಳಿಸಿದ್ದಾರೆ.

ಜೂನ್ 16ರೊಳಗಾಗಿ ಡಿಡಿಪಿಐ ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಜಿಲ್ಲಾ ಶಾಲಾ ಶಿಕ್ಷಣಾ ಇಲಾಖೆ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಮಾಹಿತಿಗಾಗಿ ಜಿಲ್ಲಾ ಕಚೇರಿಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.