ಗುರುವಾರ , ಮೇ 6, 2021
25 °C

ವಿಜಯನಗರದ ಟಿ.ಬಿ. ಡ್ಯಾಂ ಬಳಿ ವ್ಯಕ್ತಿಯ ಬರ್ಬರ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ಹೊಸಪೇಟೆ (ವಿಜಯನಗರ): ನಗರದ ತುಂಗಭದ್ರಾ ಜಲಾಶಯ‌ ಸಮೀಪದ ರೈಲು ಹಳಿ ಬಳಿ ವ್ಯಕ್ತಿಯೊಬ್ಬರ ತಲೆಯ ಮೇಲೆ ಕಲ್ಲು ಹಾಕಿ ಕೊಲೆ ಮಾಡಲಾಗಿದೆ. ಮೃತರನ್ನು ಟಿ.ಬಿ. ಡ್ಯಾಂ ಪಿಎಲ್ ಸಿ ನಿವಾಸಿ ಮೈಕಲ್ ಜಾನ್ (40) ಎಂದು ಗುರುತಿಸಲಾಗಿದೆ.

'ಜಾನ್ ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ, ಕೊಲೆ ಮಾಡಿದ ನಂತರ ಅವರ ಮೃತದೇಹವನ್ನು ರೈಲು ಹಳಿ ಬಳಿ ಬಿಸಾಕಿ ಹೋಗಿರುವ ಸಾಧ್ಯತೆ ಇದೆ.

ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಭಾನುವಾರ ಬೆಳಕಿಗೆ ಬಂದಿದೆ. ಕೊಲೆಗೆ ಇನ್ನಷ್ಟೇ ಕಾರಣ ಗೊತ್ತಾಗಬೇಕಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ' ಎಂದು ಟಿ.ಬಿ. ಡ್ಯಾಂ ಸಿಪಿಐ ಎ. ನಾರಾಯಣ ಪ್ರಜಾವಾಣಿಗೆ ತಿಳಿಸಿದ್ದಾರೆ.

ಇತ್ತೀಚೆಗೆ ನಗರದ ನ್ಯಾಯಾಲಯದ ಆವರಣದಲ್ಲಿ ವಕೀಲರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಆ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ಕೊಲೆ ನಡೆದಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು