ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ ಜಿಲ್ಲೆಯಾದ್ಯಂತ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

Last Updated 5 ಜೂನ್ 2022, 8:17 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಸಸಿ ನೆಡುವ ಕಾರ್ಯಕ್ರಮಕ್ಕೆ ಭಾನುವಾರ ನಗರದಲ್ಲಿ ಚಾಲನೆ ನೀಡಲಾಯಿತು.

ನಗರದ ಜಂಬುನಾಥ ದೇವಸ್ಥಾನ ರಸ್ತೆಯ ಬಾಲಾಂಜನೇಯ ದೇವಸ್ಥಾನದ ಬಳಿ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ., ನಗರಸಭೆ ಅಧ್ಯಕ್ಷೆ ಸುಂಕಮ್ಮ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಕೆ. ಅವರು ಸಸಿ ನೆಟ್ಟು, ನೀರೆರೆದು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅನಿರುದ್ಧ್‌ ಶ್ರವಣ್‌ ಪಿ., ವಿಶ್ವ ಪರಿಸರ ದಿನದ ನಿಮಿತ್ತ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಂದು ವಾರ ಬೇರೆ ಬೇರೆ ಕಡೆಗಳಲ್ಲಿ ಅರಣ್ಯ ಇಲಾಖೆಯ ವತಿಯಿಂದ ಸಸಿ ನೆಡಲಾಗುತ್ತದೆ. ವಿಜಯನಗರ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಸಿ ನೆಡುವ ಕಾರ್ಯವಾದರೆ ಮಳೆಗಾಲದಲ್ಲಿ ಸಸಿಗಳು ಬೆಳೆಯಲು ಅನುಕೂಲವಾಗುತ್ತದೆ ಎಂದು ಹೇಳಿದರು.

ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್‌ ವಿಶ್ವಜೀತ್‌ ಮೇಹ್ತಾ, ನಗರಸಭೆ ಉಪಾಧ್ಯಕ್ಷ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಭುನಾಥ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ವಲಯ ಅರಣ್ಯ ಅಧಿಕಾರಿ ಕೆ.ಸಿ.ವಿನಯ್ ಕುಮಾರ್, ಉಪ ವಲಯ ಅರಣ್ಯ ಅಧಿಕಾರಿ ಶಿವುಕುಮಾರ್, ನಗರಸಭೆ ಪೌರಾಯುಕ್ತ ರಮೇಶ್, ಸಚಿವ ಆನಂದ್‌ ಸಿಂಗ್‌ ಆಪ್ತ ಸಹಾಯಕ ಧರ್ಮೇಂದ್ರ ಸಿಂಗ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT