ಭಾನುವಾರ, ಅಕ್ಟೋಬರ್ 24, 2021
20 °C

ನೂರಕ್ಕೆ ನೂರು ಹಾನಗಲ್ ಕ್ಷೇತ್ರ ಗೆಲ್ಲುತ್ತೇವೆ: ಸಚಿವ ಬಿ.ಸಿ.ಪಾಟೀಲ ವಿಶ್ವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ‘ನೂರಕ್ಕೆ ನೂರು ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುತ್ತೇವೆ. ಬಿಜೆಪಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ವಿಜಯನಗರ ಜಿಲ್ಲಾ ಉತ್ಸವದ ನಿಮಿತ್ತ ಭಾನುವಾರ ಸಂಜೆ ಇಲ್ಲಿ ಹಮ್ಮಿಕೊಂಡಿದ್ದ ಎತ್ತಿನ ಬಂಡಿಗಳ‌ ಮೆರವಣಿಗೆಗೆ ನಗರದ ಎಪಿಎಂಸಿ ಬಳಿ ಚಾಲನೆ ನೀಡಿ ಮಾತನಾಡಿದರು.

ದಿವಂಗತ ಸಿ.ಎಂ. ಉದಾಸಿ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರ ಕೆಲಸಗಳು ಜನರ ನೆನಪಿನಲ್ಲಿ ಇವೆ. ಖಂಡಿತವಾಗಿ ಬಿಜೆಪಿ ಈ ಕ್ಷೇತ್ರದಲ್ಲಿ ಜಯ ಸಾಧಿಸುತ್ತದೆ' ಎಂದು ಪ್ರತಿಕ್ರಿಯಿಸಿದರು.

ಪಕ್ಷದ ವರಿಷ್ಠರು ಎರಡ್ಮೂರು ದಿನಗಳಲ್ಲಿ ಅಭ್ಯರ್ಥಿ ಹೆಸರು ಅಂತಿಮಗೊಳಿಸುತ್ತಾರೆ. ಯಾರೇ ಅಭ್ಯರ್ಥಿಯಾದರೂ ಅವರ ಜಯ ನಿಶ್ಚಯ ಎಂದು ಹೇಳಿದರು.

ವಿಜಯನಗರ ಜಿಲ್ಲೆ ಉದಯಗೊಂಡಿರುವುದು ಸಂತಸದ ವಿಷಯ. ಮತ್ತೊಮ್ಮೆ ಅದರ ಗತಕಾಲದ ವೈಭವ ಮರುಕಳಿಸಲಿದೆ ಎಂದು ತಿಳಿಸಿದರು.

ಮೆರವಣಿಗೆಯಲ್ಲಿ ಒಟ್ಟು 75 ಎತ್ತಿನ ಬಂಡಿಗಳು ಭಾಗವಹಿಸಿದ್ದು, ನಗರದ ಪ್ರಮುಖ ಮಾರ್ಗಗಳಲ್ಲಿ ಅವುಗಳ ಮೆರವಣಿಗೆ ನಡೆಯಿತು.

ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು