ಹೂವಿನಹಡಗಲಿ: ತಾಲ್ಲೂಕಿನ ಹೊಳಲು ಗ್ರಾಮ ಪರಿಮಿತಿಯ ಬೈಪಾಸ್ ರಸ್ತೆಯಲ್ಲಿ ಆಳವಾದ ಗುಂಡಿಗಳು ಬಿದ್ದಿದ್ದು, ವಾಹನ ಚಾಲಕರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.

ಬೈಪಾಸ್‌ನಿಂದ ಮುಖ್ಯರಸ್ತೆ ಸಂಪರ್ಕಿಸುವ ಸ್ಥಳದಲ್ಲಿ ಆಳವಾದ ಗುಂಡಿಗಳು ಬಿದ್ದಿವೆ. ಶನಿವಾರ ಭಾರವಾದ ಲಾರಿಯೊಂದು ಗುಂಡಿಯಲ್ಲಿ ಸಿಲುಕಿ ಸಂಚಾರ ದಟ್ಟಣೆ ಉಂಟಾಗಿತ್ತು. ನಂತರ ಜೆಸಿಬಿ ನೆರವಿನಿಂದ ಲಾರಿಯನ್ನು ಹೊರ ತೆಗೆದು ಸಂಚಾರ ಸುಗಮಗೊಳಿಸಲಾಯಿತು. ಇಂಥ ಅವಘಡಗಳು ಇಲ್ಲಿ ಸಾಮಾನ್ಯವಾಗಿದೆ.

ಮೈಲಾರ-ತೋರಣಗಲ್ಲು ರಾಜ್ಯ ಹೆದ್ದಾರಿಯ ಆಯ್ದ ಭಾಗಗಳಲ್ಲಿ ಭಾರೀ ಹೊಂಡಗಳು ಬಿದ್ದಿವೆ. ದ್ವಿಚಕ್ರ ವಾಹನ ಮತ್ತು ಸಣ್ಣ ವಾಹನ ಚಾಲಕರಿಗೂ ಸಂಚಾರ ಸವಾಲಾಗಿ ಪರಿಣಮಿಸಿದೆ. ಗುಂಡಿಗಳಲ್ಲಿ ನೀರು ಸಂಗ್ರಹಗೊಂಡಿರುವುದರಿಂದ ರಾತ್ರಿ ವೇಳೆ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.