ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಹಾರ್ ಜನಶಕ್ತಿ ಪಾರ್ಟಿ ಸಿದ್ಧತೆ

Published 15 ಡಿಸೆಂಬರ್ 2023, 13:12 IST
Last Updated 15 ಡಿಸೆಂಬರ್ 2023, 13:12 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಮಹಾರಾಷ್ಟ್ರದಲ್ಲಿ ಇಬ್ಬರು ಶಾಸಕರನ್ನು ಹೊಂದಿರುವ ಪ್ರಹಾರ್ ಜನಶಕ್ತಿ ಪಾರ್ಟಿ (ಪಿಜೆಪಿ) ರಾಷ್ಟ್ರೀಯ ಪಕ್ಷದ ಸ್ಥಾನಮಾನ ಗಳಿಸಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ್ ಎಸ್.ಚೌಧರಿ ಹೇಳಿದರು.

'ರಾಜ್ಯದ ಐದಾರು ಕ್ಷೇತ್ರಗಳಲ್ಲಿ ಈಗಾಗಲೇ ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಸದ್ಯ ಮಹಾರಾಷ್ಟ್ರದಲ್ಲಿ ಶಿಂದೆ ಸರ್ಕಾರಕ್ಕೆ ನಮ್ಮ ಇಬ್ಬರು ಶಾಸಕರು ಬೆಂಬಲ ಸೂಚಿಸಿದ್ದರೂ ಕರ್ನಾಟಕದಲ್ಲಿ ಬಿಜೆಪಿಯೊಂದಿಗೆ ಸಖ್ಯ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧೆಗೆ ಇಳಿಯಲಿದೆ’ ಎಂದು ಅವರು ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಬೆಂಗಳೂರಿನಲ್ಲಿ ಪಕ್ಷದ ಚಟುವಟಿಕೆ ಈಗಾಗಲೇ ಆರಂಭವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಹೊಸಪೇಟೆಯಿಂದಲೇ ಪಕ್ಷವನ್ನು ಕಟ್ಟುವ ಕೆಲಸ ಶುರುವಾಗಿದೆ. ರಾಷ್ಟ್ರೀಯ ಅಧ್ಯಕ್ಷ ಓಂ ಪ್ರಕಾಶ್ ಕಡೂರ್ ಅವರು ಸದ್ಯದಲ್ಲೇ ರಾಜ್ಯಕ್ಕೆ ಬರಲಿದ್ದಾರೆ’ ಎಂದರು.

‘ಮತವನ್ನು ವಿಭಜಿಸುವ ಸಲುವಾಗಿ ನಾವು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಜನರ ಬಗ್ಗೆ ನನಗೆ ಅಪಾರ ಕಾಳಜಿ ಇದೆ. ಕೃಷಿಕರು, ನಿರುದ್ಯೋಗಿಗಳು, ಅಂಗವಿಕಲರ ಕುರಿತಂತೆ ಪಕ್ಷ ಹಲವು ಯೋಜನೆ ರೂಪಿಸಿದೆ ಮತ್ತು ಕಾರ್ಯಕ್ರಮ ಹಮ್ಮಿಕೊಂಡಿದೆ’ ಎಂದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಮಂಜುನಾಥ್‌, ರಾಜ್ಯ ಘಟಕದ ಉಪಾಧ್ಯಕ್ಷ ಜಿ.ವೆಂಕಟೇಶ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT