ಪ್ರಜಾವಾಣಿ ವಾರ್ತೆ

ಹರಪನಹಳ್ಳಿ: ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರು ‘ಪ್ರಜಾವಾಣಿ’ ಸಹಯೋಗದಲ್ಲಿ ಹೊರತಂದಿರುವ 2026ನೇ ಸಾಲಿನ ಕ್ಯಾಲೆಂಡರ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹಮ್ಮದ್ ಖಾನ್ ಅವರು ಗುರುವಾರ ಬಿಡುಗಡೆ ಮಾಡಿದರು.

ತಾಲ್ಲೂಕಿನ ತಾವರಗುಂದಿಯಲ್ಲಿ ಆಯೋಜಿಸಿದ್ದ ಜಾನಪದ ಸಂಕ್ರಾಂತಿ ಸಮಾರಂಭದಲ್ಲಿ ಅವರು ಬಿಡುಗಡೆ ಮಾಡಿದರು.

ಕ್ಯಾಲೆಂಡರ್ನಲ್ಲಿ ಹಂಪಿ ಉತ್ಸವದ ರೂವಾರಿಯಾಗಿದ್ದ ಎಂ.ಪಿ.ಪ್ರಕಾಶ್ ಮತ್ತು ಹರಪನಹಳ್ಳಿಗೆ 371ಜೆ ಕಲ್ಪಿಸಲು ಹೋರಾಟ ಮಾಡಿ ಯಶಸ್ಸು ಕಂಡಿದ್ದ ಎಂ.ಪಿ.ರವೀಂದ್ರ ಮತ್ತು ಅವರ ತಾಯಿ ಎಂ.ಪಿ.ರುದ್ರಾಂಬ ಭಾವಚಿತ್ರಗಳಿವೆ. ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಜನರೊಂದಿಗೆ ಚರ್ಚಿಸುವುದು, ಶಾಸಕಿ ಲತಾ ಅವರು ಹರಪನಹಳ್ಳಿ ವಿದಾನಸಭಾ ಕ್ಷೇತ್ರಕ್ಕೆ ತಂದು ಅನುಷ್ಠಾನಗೊಳಿಸುವ ಕಾಮಗಾರಿಗಳ ಭೂಮಿಪೂಜೆ ಪೊಟೊಗಳನ್ನು ಎಲ್ಲ ಪುಟಗಳಲ್ಲಿ ಅಳವಡಿಸಲಾಗಿದೆ.

ತಾಲ್ಲೂಕಿನಲ್ಲಿ ಜರುಗುವ ಪ್ರಮುಖ ಜಾತ್ರೆ, ಹಬ್ಬ ಹರಿದಿನಗಳ ಬಗ್ಗೆ ಶಾಸಕರು ಶುಭ ಕೋರಿರುವ ಮಾಹಿತಿ ನಮೂದಿಸಲಾಗಿದೆ. ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್, ಹೊನ್ನಾಳಿ ಶಾಸಕ ಡಿ.ಜೆ.ಶಾಂತನಗೌಡ, ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್, ಹುಡಾ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಸಿಇಓ ನೋಂಗ್ಜಾಯ್ ಮಹಮದ್ ಅಲಿ ಅಕ್ರಂ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಮುಖಂಡರಾದ ಎಚ್.ಎಂ.ಮಲ್ಲಿಕಾರ್ಜುನ, ಕೀರ್ತಿ ಕುಮಾರ, ಎಚ್.ಎಂ.ಗೌತಮ್ ಪ್ರಭು, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಉದಯಶಂಕರ, ಮತ್ತೂರು ಬಸವರಾಜ, ಸಾಸ್ವಿಹಳ್ಳಿ ನಾಗರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.