ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಸೃಜನಶೀಲತೆಗೆ ಪ್ರತಿಭಾ ಕಾರಂಜಿ ವೇದಿಕೆ

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜಿಪಂ ಸಿಇಒ ಹರ್ಷಲ್‌ ಭೋಯರ್‌ ಹೇಳಿಕೆ
Last Updated 29 ನವೆಂಬರ್ 2022, 13:26 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಮಕ್ಕಳಲ್ಲಿ ಅಡಗಿರುವ ಪ್ರತಿಭೆ, ಸೃಜನಶೀಲತೆ ಹೊರಹಾಕಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್‌ ಭೋಯರ್‌ ತಿಳಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಮಂಗಳವಾರ ನಗರದ ಆಕಾಶ್‌ ಇಂಟರ್‌ನ್ಯಾಷನಲ್‌ ಶಾಲೆಯಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉದ್ಘಾಟಿಸಿ ಮಾತನಾಡಿದರು.

ಮಕ್ಕಳಲ್ಲಿ ವಿವಿಧ ಬಗೆಯ ಪ್ರತಿಭೆ ಇರುತ್ತದೆ. ಅವುಗಳನ್ನು ಗುರುತಿಸಿ, ಅದಕ್ಕೆ ಪೂರಕವಾದ ವಾತಾವರಣ ನಿರ್ಮಿಸುವುದು ಅತ್ಯಗತ್ಯ. ಸೃಜನಶೀಲ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸುವುದರಿಂದ ಅವರ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್‍ ಮಾತನಾಡಿ, ಮಕ್ಕಳು ಅರಳುವ ಹೂಗಳಂತೆ ಇರುತ್ತಾರೆ. ಅವರಲ್ಲಿರುವ ಪ್ರತಿಭೆಗೆ ಸಾಣೆ ಹಿಡಿಯುವ ಕೆಲಸ ಮಾಡಬೇಕಿದೆ. ಪ್ರತಿಭಾ ಕಾರಂಜಿಯಂಥ ವೇದಿಕೆ ಮೂಲಕ ಮಕ್ಕಳಲ್ಲಿರುವ ಕಲೆ ಮತ್ತು ಸಾಂಸ್ಕೃತಿಕ ಆಸಕ್ತಿ ಎತ್ತಿ ಹಿಡಿಯುವ ಕೆಲಸ ಶಿಕ್ಷಣ ಇಲಾಖೆ ಮಾಡುತ್ತಿದೆ ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಕ್ವಿಜ್, ಛದ್ಮವೇಷ, ಜಾನಪದ ನೃತ್ಯ, ಹಾಸ್ಯ, ಚಿತ್ರಕಲೆ, ಕ್ಲೇ ಮಾಡ್ಲಿಂಗ್ ಸೇರಿದಂತೆ ಮುಂತಾದ ಸ್ಪರ್ಧೆಗಳನ್ನು ಆಯೋಜಿಸಿದೆ. ತಾಲ್ಲೂಕು ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳು ಈ ದಿನ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಬೇಕು. ಅಲ್ಲಿಯೂ ಸಹ ಉತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಹೇಳಿದರು.

ನಗರಸಭೆ ಅಧ್ಯಕ್ಷೆ ಸುಂಕಮ್ಮ, ಬಳ್ಳಾರಿ ಡಯಟ್‍ ಪ್ರಾಚಾರ್ಯ ಹನುಮಕ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಚನ್ನಬಸಪ್ಪ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಮಹಮ್ಮದ್‌ ಇಮಾಮ್‍ ನಿಯಾಜಿ, ಡಿ.ವೈ.ಪಿ.ಸಿ. ಹನುಮಂತಪ್ಪ, ಶಿಕ್ಷಣಾಧಿಕಾರಿಗಳಾದ ಶೇಖರಪ್ಪ ಹೊರಪೇಟೆ, ಪ್ರೌಢ ಶಾಲೆ ಮುಖ್ಯಗುರುಗಳ ಸಂಘದ ಜಿಲ್ಲಾಧ್ಯಕ್ಷೆ ಡಾ.ಅಕ್ಕಮಹಾದೇವಿ, ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್ ಕೆ., ನೌಕರ ಸಂಘದ ಜಿಲ್ಲಾ ಕಾರ್ಯದರ್ಶಿ ಕಡ್ಲಿ ವೀರಭದ್ರೇಶ್, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಪ್ಪ, ರಾಜ್ಯ ಪರಿಷತ್ ಸದಸ್ಯ ಎಸ್.ಬಸವರಾಜ್, ಕ್ಷೇತ್ರ ಸಮನ್ವಯ ಅಧಿಕಾರಿ ಶಿವಕುಮಾರ್, ಸಹಾಯಕ ನಿರ್ದೇಶಕ ಪನಮೇಶಲು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT